ಮನೆ ಸುದ್ದಿ ಜಾಲ 1.13 ಕೋಟಿ ರೂ ವೆಚ್ಚದ ಹೆಚ್ಚುವರಿ ಕಟ್ಟಡ ಉದ್ಘಾಟನೆ

1.13 ಕೋಟಿ ರೂ ವೆಚ್ಚದ ಹೆಚ್ಚುವರಿ ಕಟ್ಟಡ ಉದ್ಘಾಟನೆ

0

ಮಂಡ್ಯ: ಕೆ.ಆರ್. ಪೇಟೆ ತಾಲ್ಲೂಕಿನ ಸಂತೆಬಾಚಳ್ಳಿಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 1.13 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕೊಠಡಿಗಳನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಇಂದು ಉದ್ಘಾಟಿಸಿದರು.

ಸಿ.ಎಸ್.ಆರ್ ಯೋಜನೆಯಡಿ ಈ ಕಟ್ಟಡ ವನ್ನು ನಿರ್ಮಾಣ ಮಾಡಲಾಗಿದ್ದು, ಕೈಗಾರಿಕೋದ್ಯಮಿಗಳು ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಸಹಾಯ ಮಾಡಿದರೆ ಸಮಾಜ ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತದೆ ಎಂದರು.

ಇದು ಸ್ಪರ್ಧಾತ್ಮಕ ಯುಗವಾಗಿದ್ದು, ವಿದ್ಯಾರ್ಥಿಗಳು ಜ್ಞಾನರ್ಜನೆಗೆ ದಿನದಲ್ಲಿ ಹೆಚ್ಚಿನ ಸಮಯ ಮೀಸಲಿಡಬೇಕು. ಕಳೆದ ಬಾರಿಗಿಂತಲೂ ಮುಂದಿನ ಸಾಲಿನಲ್ಲಿ ನಡೆಯುವ ಎಸ್.ಎಸ್.ಎಲ್. ಸಿ ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರುವ ರೀತಿ ಶಿಕ್ಷಕರು ಶ್ರಮಿಸಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜು ಗೊಳಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಕಾಲೇಜಿನ ಕೊಠಡಿ ನಿರ್ಮಾಣಕ್ಕೆ ಸಿ.ಎಸ್.ಆರ್ ಅನುದಾದಡಿ ಅನುದಾನ ಒದಗಿಸಿದ್ದ ಡೆಲ್ಟಾ ವಾಟರ್ ಇನ್ಫ್ರಾಮುಖ್ಯಸ್ಥ ಮೃತ್ಯುಂಜಯ ಸ್ವಾಮಿ ಅವರನ್ನು ಕಾರ್ಯಕ್ರಮದಲ್ಲಿ ಸಚಿವರು ಗೌರವಿಸಿದರು.

ಕಾರ್ಯಕ್ರಮದಲ್ಲಿ ಕೆ.ಆರ್ . ಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಟಿ. ಮಂಜು, ಮೈ ಶುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆರ್ ನಂದಿನಿ, ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಉಪವಿಭಾಗಾಧಿಕಾರಿ ಶ್ರೀನಿವಾಸ್, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.