Saval TV on YouTube
ನವದೆಹಲಿ: 2024ರ ಜನವರಿ 1 ರಂದು ಬಹು ನಿರೀಕ್ಷಿತ ಆಯೋಧ್ಯಾ ರಾಮ ಮಂದಿರದ ಉದ್ಘಾಟನೆಯನ್ನು ನೆರವೇರಿಸಲಾಗುವುದು ಎಂದು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಘೋಷಣೆ ಮಾಡಿದ್ದಾರೆ.
ತ್ರಿಪುರಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2024ರ ಮೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದೇ ವರ್ಷದ ಆದಿಯಲ್ಲಿ ರಾಮ ಮಂದಿರ ಉದ್ಘಾಟನೆಯಾಗಲಿದೆ.
ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ನ್ಯಾಯಾಲಯದಲ್ಲಿ ಅಡ್ಡಿಪಡಿಸಿತು. ಸುಪ್ರೀಂ ಕೋರ್ಟ್ನ ತೀರ್ಪು ಹೊರಬಂದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಾಣ ಆರಂಭ ಮಾಡಿದರು ಎಂದು ಹೇಳಿದರು.