ಮೈಸೂರು(Mysuru): ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ -2022ರ ಹಿನ್ನೆಲೆಯಲ್ಲಿ ಕೈಗಾರಿಕಾ ದಸರಾ ಉದ್ಘಾಟನಾ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್ ನಿರಾಣಿ, ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಸಚಿವ ನಿರಾಣಿಯವರು, ರಾಜ್ಯವು ಇಂದು ಕೈಗಾರಿಕಾ ಹಬ್ ಆಗಿ ಬೆಳೆಯುತ್ತಿದ್ದು, ಬೆಂಗಳೂರು ಅತಿ ಹೆಚ್ಚು ಹೂಡಿಕೆಯ ಕೇಂದ್ರವಾಗಿದೆ. ಹೀಗಾಗಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಯ ಜೊತೆಗೆ ಆರ್ಥಿಕತೆಯು ಕೂಡ ಅಭಿವೃದ್ಧಿ ಕಾಣುತ್ತಿದೆ. ಅದರಂತೆ ಮುಂದಿನ ದಿನಗಳಲ್ಲಿ ಮೈಸೂರಿನಲ್ಲಿಯೂ ಕೂಡ ಕೈಗಾರಿಕಾ ಕ್ರಾಂತಿ ಮಾಡುವುದು ನಮ್ಮ ಸರ್ಕಾರದ ಪ್ರಮುಖ ಉದ್ದೇಶವಾಗಿದೆ ಎಂದರು.
ಈ ವೇಳೆ ನಂಜನಗೂಡು ಶಾಸಕ ಹರ್ಷವರ್ಧನ, ಚಾಮರಾಜನಗರ ಶಾಸಕ ಎಲ್.ನಾಗೇಂದ್ರ, ಮೈಸೂರು ನಗರ ಮೇಯರ್ ಶಿವಕುಮಾರ್, ಮೈಸೂರು ಡಿಸಿ ಬಗಾದಿ ಗೌತಮ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Saval TV on YouTube