ಮನೆ ರಾಜಕೀಯ ರಾಮನಗರ ನೂತನ ಜಿಲ್ಲಾ ಆಸ್ಪತ್ರೆ ಉದ್ಘಾಟನೆ: ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ

ರಾಮನಗರ ನೂತನ ಜಿಲ್ಲಾ ಆಸ್ಪತ್ರೆ ಉದ್ಘಾಟನೆ: ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ

0

ರಾಮನಗರ: ರಾಮನಗರ ನೂತನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಅನುಪಸ್ಥಿತಿಯಲ್ಲಿ ಉದ್ಘಾಟನೆ ಮಾಡಿದ ಕಾರಣಕ್ಕಾಗಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.

ಪರಸ್ಪರ ನೂಕಾಟ, ತಳ್ಳಾಟ ನಡೆದಿದೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲಕಾರ ವಾತಾವರಣ ನಿರ್ಮಾಣವಾಗಿತ್ತು.

ಕುಮಾರಸ್ವಾಮಿ ಆಗಮನಕ್ಕೂ ಮುನ್ನ ಆಸ್ಪತ್ರೆ ಉದ್ಘಾಟನೆ ಸರಿ ಅಲ್ಲ ಎಂದು ಜೆಡಿಎಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಸಹ ಘೋಷಣೆಗಳನ್ನು ಕೂಗಿದ್ದಾರೆ. ಹೀಗೆ ಪರಸ್ಪರ ಘೋಷಣೆ ಕೂಗುತ್ತಿದ್ದ ಎರಡೂ ಪಕ್ಷದ ಕಾರ್ಯಕರ್ತರ ನಡುವೆ  ನೂಕಾಟ ತಳ್ಳಾಟ ನಡೆಯಿತು.

ಬಿಜೆಪಿ ಕಾರ್ಯಕರ್ತರು ಮೋದಿ ಪರ ಘೋಷಣೆ ಕೂಗಿದರೆ, ಜೆಡಿಎಸ್ ಕಾರ್ಯಕರ್ತರು ಕುಮಾರಸ್ವಾಮಿ ಪರ ಘೋಷಣೆ ಕೂಗಿದರು. ಈ ವೇಳೆ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ನಂತರ ಆಗಮಿಸಿದ ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವರೇ ಆಸ್ಪತ್ರೆ ಉದ್ಘಾಟಿಸಲು ತಾವೇ ಹೇಳಿದ್ದು, ಆಸ್ಪತ್ರೆ ಉದ್ಘಾಟನೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಸ್ಪಷ್ಪಪಡಿಸಿದರು. ನಂತರ ಪರಿಸ್ಥಿತಿ ತಿಳಿಯಾಯಿತು.

ಹಿಂದಿನ ಲೇಖನಗುಡಿಸಲಿನ ಮೇಲೆ ಹರಿದ ಲಾರಿ: ಕರ್ನಾಟಕ ಮೂಲಕ ಮೂವರ ಸಾವು
ಮುಂದಿನ ಲೇಖನಅದಾನಿ ಕುರಿತ ಹಿಂಡೆನ್ ಬರ್ಗ್ ವರದಿ: ತನಿಖೆಗೆ ನ್ಯಾ. ಸಪ್ರೆ ನೇತೃತ್ವದ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್