ಮನೆ ಅಪರಾಧ ಭೀಕರ ರಸ್ತೆ ಅಪಘಾತ: ಶಾಸಕರ ಪುತ್ರ ಸೇರಿ 7 ಮಂದಿ ವೈದ್ಯಕೀಯ ವಿದ್ಯಾರ್ಥಿಗಳ ಸಾವು

ಭೀಕರ ರಸ್ತೆ ಅಪಘಾತ: ಶಾಸಕರ ಪುತ್ರ ಸೇರಿ 7 ಮಂದಿ ವೈದ್ಯಕೀಯ ವಿದ್ಯಾರ್ಥಿಗಳ ಸಾವು

0

ವಾರ್ಧಾ: ಮಹಾರಾಷ್ಟ್ರದ ವಾರ್ಧಾ-ಯವತ್ಮಾಲ್​ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಾಸಕರ ಪುತ್ರ ಸೇರಿ 7 ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.

ಸೆಲ್ಸುರಾ ಪ್ರದೇಶದಲ್ಲಿ ರಾತ್ರಿ 1.30ರ ಸುಮಾರಿಗೆ ದಿಯೋಲಿಯಿಂದ ವಾರ್ಧಾ ಕಡೆಗೆ ಬರುತ್ತಿದ್ದ ಝೈಲೋ ಕಾರು ಸೇತುವೆ ಮೇಲಿಂದ ಸುಮಾರು 50 ಅಡಿ ಕೆಳಗೆ ಕಾರು ಬಿದ್ದ ಪರಿಣಾಮ ಕಾರಿನಲ್ಲಿದ್ದ ಏಳು ಮಂದಿ  ಮೃತಪಟ್ಟಿದ್ದಾರೆ.

ಮೃತಪಟ್ಟಿರುವ 7 ಮಂದಿ ಸಾವಂಗಿಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.

ಗೊಂಡಿಯಾ ಜಿಲ್ಲೆಯ ತಿರೋಡಾ ಶಾಸಕ ವಿಜಯ್ ರಹಂಗ್‌ಡೇಲ್ ಅವರ ಪುತ್ರ ಆವಿಷ್ಕಾರ್ ಕೂಡ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆಂದು ಹೇಳಲಾಗುತ್ತಿದ್ದು, ಇನ್ನುಳಿದ 6 ಮಂದಿ ವೈದ್ಯಕೀಯ ಕೋರ್ಸ್‌ಗಳಿಗಾಗಿ ದೇಶದ ವಿವಿಧ ಭಾಗಗಳಿಂದ ಬಂದವರು ಎಂದು ತಿಳಿದು ಬಂದಿದೆ.

ಮೃತರನ್ನು ನೀರಜ್ ಚೌಹಾಣ್, ನಿತೇಶ್ ಸಿಂಗ್, ವಿವೇಕ್ ನಂದನ್, ಪ್ರತ್ಯೂಷ್ ಸಿಂಗ್, ಶುಭಂ ಜೈಸ್ವಾಲ್, ಪವನ್ ಶಕ್ತಿ ಎಂದು ಗುರುತಿಸಲಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಪರಿಶೀಲನೆ ಕೈಗೊಂಡಿದ್ದಾರೆ. ಬಳಿಕ ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. 

ಮೃತರ ಸಂಬಂಧಿಕರು ಆಸ್ಪತ್ರೆ ಬಳಿ ದೌಡಾಯಿಸಿದ್ದು, ಆಸ್ಪತ್ರೆ ಬಳಿ ಮೃತರ ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿದೆ. ಈ ಘಟನೆ ಕುರಿತು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮೃತರ ಕುಟುಂಬಸ್ಥರಿಗೆ 2 ಲಕ್ಷ ರೂ. ಪರಿಹಾರ ಘೋಷಣೆ: ದುರ್ಘಟನೆಗೆ ತೀವ್ರ ಸಂತಾಪ ಸೂಚಿಸುವ ಪ್ರಧಾನಮಂತ್ರಿ ನರೇಂದ್ರ ಮೋದಿವಯವರು ಮೃತರ ಕುಟುಂಬಸ್ಥರಿಗೆ ತಲಾ ರೂ.2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಅಲ್ಲದೆ, ಗಾಯಾಳುಗಳಿಗೆ ರೂ.50,000 ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. 
 
ಹಿಂದಿನ ಲೇಖನಎಸ್.ಎ.ರಾಮದಾಸ್ ಗೆ ಸಚಿವ ಸ್ಥಾನ ನೀಡಿ: ಎಂಎಲ್ ಸಿ ಹೆಚ್.ವಿಶ್ವನಾಥ್
ಮುಂದಿನ ಲೇಖನ19 ಐಎಎಸ್ ಅಧಿಕಾರಿಗಳ ವರ್ಗ