ಮನೆ ಕಾನೂನು ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ: ಡಿಕೆಶಿ ವಿರುದ್ಧದ ಸಿಬಿಐ ತನಿಖೆಗೆ ನೀಡಿರುವ ಮಧ್ಯಂತರ ತಡೆಯಾಜ್ಞೆ...

ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ: ಡಿಕೆಶಿ ವಿರುದ್ಧದ ಸಿಬಿಐ ತನಿಖೆಗೆ ನೀಡಿರುವ ಮಧ್ಯಂತರ ತಡೆಯಾಜ್ಞೆ ವಿಸ್ತರಣೆ

0

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆ ಆದೇಶವನ್ನು ಹೈಕೊರ್ಟ್ ಏಪ್ರಿಲ್ 13ರವರೆಗೆ ಗುರುವಾರ ವಿಸ್ತರಿಸಿದೆ.

Join Our Whatsapp Group

ಸಿಬಿಐ ತನಿಖೆ ರದ್ದು ಕೋರಿ ಡಿ ಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠವು ನಡೆಸಿತು.

ಸಿಬಿಐ ತನಿಖೆಗೆ ಅನುಮತಿ ನೀಡಿದ ಸರ್ಕಾರದ ಆದೇಶ ಪ್ರಶ್ನಿಸಿ ಶಿವಕುಮಾರ್ ಸಲ್ಲಿಸಿರುವ ಮತ್ತೊಂದು ಅರ್ಜಿ ವಿಚಾರಣೆಯನ್ನೂ ಏಪ್ರಿಲ್ 13ಕ್ಕೆ ಪೀಠ ಮುಂದೂಡಿತು. ಹೀಗಾಗಿ, ಅಲ್ಲಿಯವರೆಗೆ ಸಿಬಿಐ ತನಿಖೆಗೆ ನೀಡಿರುವ ಮಧ್ಯಂತರ ತಡೆಯಾಜ್ಞೆಯನ್ನು ಮುಂದುವರಿಸಿತು.

ಭ್ರಷ್ಟಾಚಾರ ನಿಗ್ರಹ ಕಾಯಿದೆ-1988ರ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಸಿಬಿಐ 2020ರ ಅಕ್ಟೋಬರ್ 3ರಂದು ಡಿ ಕೆ ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಿತ್ತು. ಸಿಬಿಐ ದಾಖಲಿಸಿರುವ ಈ ಎಫ್ಐಆರ್ ಕಾನೂನು ಬಾಹಿರವಾಗಿದ್ದು, ತನಿಖೆ ರದ್ದುಪಡಿಸಬೇಕು ಎಂದು ಕೋರಿ ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಿಬಿಐ ತನಿಖೆಗೆ 2023ರ ಫೆಬ್ರವರಿ 10ರಂದು ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಇದೇ ವೇಳೆ ಸಿಬಿಐ ತನಿಖೆಗೆ ಅನುಮತಿ ನೀಡಿರುವ ಸರ್ಕಾರದ ಆದೇಶವನ್ನು ರದ್ದುಪಡಿಸುವಂತೆ ಕೋರಿ ಶಿವಕುಮಾರ್ ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ. ಈ ಎರಡೂ ಅರ್ಜಿಗಳ ವಿಚಾರಣೆಯನ್ನು ಏಪ್ರಿಲ್ 13ಕ್ಕೆ ಹೈಕೋರ್ಟ್ ನಿಗದಿಪಡಿಸಿದೆ.