ಮನೆ ರಾಜ್ಯ ರಾಜ್ಯದಲ್ಲಿ ಕೋವಿಡ್‌ ಹೆಚ್ಚಳ: 1249 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೋವಿಡ್‌ ಹೆಚ್ಚಳ: 1249 ಮಂದಿಗೆ ಪಾಸಿಟಿವ್

0

ಬೆಂಗಳೂರು (Bengaluru): ರಾಜ್ಯದಲ್ಲಿ ಕೋವಿಡ್‌ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಯಲ್ಲಿ 1249 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,68,365ಕ್ಕೆ ಏರಿಕೆಯಾಗಿದೆ.

ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40075ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

1154 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,22,541ಕ್ಕೆ ಏರಿಕೆಯಾಗಿದೆ. ಇನ್ನು 5707 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ 1109 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,03,107ಕ್ಕೆ ಏರಿಕೆಯಾಗಿದೆ.