ಮನೆ ರಾಷ್ಟ್ರೀಯ ದೇಶದಲ್ಲಿ ಕೋವಿಡ್‌ ಸೋಂಕಿನಲ್ಲಿ ಹೆಚ್ಚಳ: 4,270 ಪಾಸಿಟಿವ್‌

ದೇಶದಲ್ಲಿ ಕೋವಿಡ್‌ ಸೋಂಕಿನಲ್ಲಿ ಹೆಚ್ಚಳ: 4,270 ಪಾಸಿಟಿವ್‌

0

ನವದೆಹಲಿ (New Delhi): ದೇಶದಲ್ಲಿ ಮತ್ತೆ ಕೋವಿಡ್ ಸೋಂಕು ಹೆಚ್ಚಳವಾಗುತ್ತಿದೆ. ಭಾನುವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 4,270 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 15 ಮಂದಿ ಸಾವನ್ನಪ್ಪಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,76,817ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,692ಕ್ಕೆ ಏರಿಕೆಯಾಗಿದೆ.‌

ಈ ನಡುವೆ ಕಳೆದ 24 ಗಂಟೆಗಳಲ್ಲಿ 2,619 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,26,28,073ಕ್ಕೆ ತಲುಪಿದೆ. 24,052 ಸಕ್ರಿಯ ಪ್ರಕರಣಗಳಿವೆ.

ಇನ್ನು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 4,45,814 ಮಂದಿಯನ್ನು ಕೋವಿಡ್‌ ಪರೀಕ್ಷೆಗೊಳಪಡಿಸಲಾಗಿದ್ದು, ಇದರೊಂದಿಗೆ ಈವರೆಗೂ 85,22,09,788 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,94,09,46,157  ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಹಿಂದಿನ ಲೇಖನಜೂನ್‌ 5 ಹವಾಮಾನ ವರದಿ
ಮುಂದಿನ ಲೇಖನಪಠ್ಯಪುಸ್ತಕ ಪರಿಷ್ಕರಣೆ: ಸಚಿವ ಬಿ.ಸಿ.ನಾಗೇಶ್‌ ರಿಂದ ಸಿಎಂ ಬೊಮ್ಮಾಯಿಗೆ ವರದಿ ಸಲ್ಲಿಕೆ