ನವದೆಹಲಿ(Newdelhi): ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ (ಡಿಎ) ಹಾಗೂ ಡಿಆರ್ ಅನ್ನು ಶೇ 4ರಷ್ಟು ಹೆಚ್ಚಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.
ಇದು 2022ರ ಜುಲೈ 1ರಿಂದಲೇ ಪೂರ್ವಾನ್ವಯವಾಗಲಿದೆ. ಇದರಿಂದ ಸುಮಾರು 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 61 ಲಕ್ಷ ಪಿಂಚಣಿದಾರರಿಗೆ ಪ್ರಯೋಜನವಾಗಲಿದೆ.
ಈ ಕುರಿತು ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.ತುಟ್ಟಿ ಭತ್ಯೆ ಮತ್ತು ತುಟ್ಟಿ ಪರಿಹಾರ ಹೆಚ್ಚಳದಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ ಕ್ರಮವಾಗಿ ₹ 12,852.56 ಕೋಟಿ ಹಾಗೂ ₹ 8,568.36 ಕೋಟಿ ಹೊರೆಯಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.