ಬೆಂಗಳೂರು: ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳ ನಿಯಂತ್ರಣ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಬಿಬಿಪಿಎಂ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ಬೆಂಗಳೂರಿನಲ್ಲೇ 4427 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಡೆಂಗ್ಯೂ ನಿಯಂತ್ರಣದಲ್ಲಿಡಲು ಮುಂಜಾಗೃತ ಕ್ರಮ ವಹಿಸುವಂತೆ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಡೆಂಗ್ಯೂ ಕುರಿತಂತೆ ಕೇವಲ ಜಾಗೃತಿ ಜಾಥಾ ಮಾಡಿದರೆ ಪ್ರಯೋಜನವಿಲ್ಲ. ಸ್ಥಳೀಯ ಮಟ್ಟದಲ್ಲಿ ಆರೋಗ್ಯ ಕಾರ್ಯಕರ್ತರನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಜನರನ್ನ ಎಚ್ವರಿಸಬೇಕು. ಟೆಸ್ಟಿಂಗ್ ಸ್ಯಾಂಪಲ್ಸ್ ಹೆಚ್ಚು ಮಾಡುವ ಅಗತ್ಯವಿದೆ. ಕಳೆದ ಎರಡು ತಿಂಗಳಲ್ಲಿ ಡೆಂಗ್ಯೂ ಪ್ರಕರಣಗಳು ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚೆತ್ತುಕೊಂಡು ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಆ್ಯಪ್ ಮೂಲಕ ಡೆಂಗ್ಯೂ ಪ್ರಕರಣಗಳನ್ನು ಮಾನಿಟರ್ ಮಾಡುವುದಾಗಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ನಾಳೆ ಆ್ಯಪ್ ಬಿಡುಗಡೆಯಾಗಲಿದ್ದು, ಆರೋಗ್ಯ ಕಾರ್ಯಕರ್ತರು ವಾರ್ಡ್ ಗಳಲ್ಲಿ ಎಷ್ಟರ ಮಟ್ಟಿಗೆ ಕಾರ್ಯನಿರ್ವಹಿಸಿದ್ದಾರೆ ಎಂಬುದನ್ನು ಮಾನಿಟರ್ ಮಾಡಬಹುದು. ಅಲ್ಲದೇ ತಿಂಗಳ ಮೊದಲೇ ಡೆಂಗ್ಯೂ ಪ್ರಕರಣಗಳ ಬಗ್ಗೆ ಮೂನ್ಸೂಚನೆ ನೀಡುವ ತಂತ್ರಜ್ಞಾನ ಇಂಡಿಯನ್ ಇನ್ಸ್ ಸ್ಟಿಟ್ಯೂಟ್ ಆಫ್ ಸೈನ್ಸ್ ನವರು ಕಂಡುಹಿಡಿದಿದ್ದಾರೆ. ಈ ತಂತ್ರಜ್ಞಾನವನ್ನ ಕೂಡ ನಾಳೆ ಬಿಡುಗಡೆಗೊಳಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಡೆಂಗ್ಯೂ ವಲಯವಾರು ಪ್ರಕರಣ
ಬೊಮ್ಮನಹಳ್ಳಿ -272 ಪ್ರಕರಣ
ದಾಸರಹಳ್ಳಿ -73
ಬೆಂಗಳೂರು ಪೂರ್ವ ವಲಯ -1218
ಮಹದೇವಪುರ -875
ಆರ್ ಆರ್ ನಗರ -457
ಬೆಂಗಳೂರು ದಕ್ಷಿಣ -1003
ಬೆಂಗಳೂರು ಪಶ್ಚಿಮ -635
ಯಲಹಂಕ -393