ಬೆಂಗಳೂರು(Bengaluru): ಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು,ಗೌರವ ಸಂಭಾವನೆಯನ್ನು ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ.
ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ವೇತನವನ್ನು 9 ಸಾವಿರದಿಂದ 12 ಸಾವಿರಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಇನ್ನು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯನ್ನು ನೀಗಿಸಲು 3 ಸಾವಿರದ 708 ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲಾಗುವುದು ಎಂದು ಸಹ ತಿಳಿಸಿದ್ದಾರೆ.