ಮನೆ ರಾಜ್ಯ ಪಿಯು ಕಾಲೇಜು ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಳ

ಪಿಯು ಕಾಲೇಜು ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಳ

0

ಬೆಂಗಳೂರು(Bengaluru): ಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ  ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು,ಗೌರವ ಸಂಭಾವನೆಯನ್ನು ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ.

ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ವೇತನವನ್ನು 9 ಸಾವಿರದಿಂದ 12 ಸಾವಿರಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಇನ್ನು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯನ್ನು ನೀಗಿಸಲು 3 ಸಾವಿರದ 708 ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲಾಗುವುದು ಎಂದು ಸಹ ತಿಳಿಸಿದ್ದಾರೆ.

ಹಿಂದಿನ ಲೇಖನಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಅಗತ್ಯವಿಲ್ಲ: ಸಚಿವ ಎಸ್.ಟಿ.ಸೋಮಶೇಖರ್ ಸಭೆಯಲ್ಲಿ ತೀರ್ಮಾನ
ಮುಂದಿನ ಲೇಖನಅನುದಾನದ ಆಸೆಗೆ ಜನರಿಗೆ ತೊಂದರೆ ನೀಡುವುದು ಬೇಡ: ಎಂ.ಅಶ್ವಿನ್‌ಕುಮಾರ್‌