Saval TV on YouTube
ರಾಜ್ಯದ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವಧನ ಹೆಚ್ಚಳ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಗ್ರಾಮ ಪಂಚಾಯ್ತಿಗಳ ಅಧ್ಯಕ್ಷರಿಗೆ 3 ಸಾವಿರ ರೂ. ಉಪಾಧ್ಯಕ್ಷರಿಗೆ 2 ಸಾವಿರ ರೂ. ಹಾಗೂ ಸದಸ್ಯರಿಗೆ 1 ಸಾವಿರ ರೂ. ಮಾಸಿಕ ಗೌರವಧನ ನೀಡಲಾಗುತ್ತಿದೆ.
ಈಗ ಗೌರವಧನವನ್ನು ಪರಿಷ್ಕರಿಸಿ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರಿಗೆ 6 ಸಾವಿರ ರೂ ಉಪಾಧ್ಯಕ್ಷರುಗಳಿಗೆ 4 ಸಾವಿರ ರೂ ಹಾಗೂ ಸದಸ್ಯರುಗಳಿಗೆ 4 ಸಾವಿರ ರೂ ಮಾಸಿಕ ಗೌರವಧನವನ್ನು ಪರಿಷ್ಕರಿಸಲಾಗಿದೆ.