ಮನೆ ರಾಜ್ಯ ತುಂಗಭದ್ರಾ ಜಲಾಶಯದಿಂದ ಹೊರ ಹರಿವು ಹೆಚ್ಚಳ: ಹಂಪಿ ಸ್ಮಾರಕಗಳು ಮುಳುಗುವ ಭೀತಿ

ತುಂಗಭದ್ರಾ ಜಲಾಶಯದಿಂದ ಹೊರ ಹರಿವು ಹೆಚ್ಚಳ: ಹಂಪಿ ಸ್ಮಾರಕಗಳು ಮುಳುಗುವ ಭೀತಿ

0

ಹೊಸಪೇಟೆ (ವಿಜಯನಗರ): ಇಲ್ಲಿನ ತುಂಗಭದ್ರಾ ಜಲಾಶಯ ಸಂಪೂರ್ಣ ತುಂಬಿರುವುದರಿಂದ ಹೊರ ಹರಿವು ಹೆಚ್ಚಳವಾಗಿರುವ ಕಾರಣ ವಿಶ್ವಪ್ರಸಿದ್ಧ ಹಂಪಿ ಸ್ಮಾರಕಗಳು ಮುಳುಗುವ ಆತಂಕ ಎದುರಾಗಿದೆ.

ಹಂಪಿ ಪುರಂದರ ಮಂಟಪ, ವಿಜಯನಗರ ಕಾಲದ ಕಾಲು ಸೇತುವೆ, ರಾಮ ಲಕ್ಷ್ಮಣ ದೇವಸ್ಥಾನ, ಚಕ್ರತೀರ್ಥ ಸ್ನಾನಘಟ್ಟ ತುಂಗಭದ್ರಾ ನದಿ ಪಾತ್ರಕ್ಕೆ ಹೊಂದಿಕೊಂಡಿವೆ.

ಜಲಾಶಯದ ಒಟ್ಟು 33 ಕ್ರಸ್ಟ್ ಗೇಟ್ ಗಳ ಪೈಕಿ 28 ಗೇಟ್ ಗಳಿಂದ ನದಿಗೆ ಸದ್ಯ 80 ಸಾವಿರ ಕ್ಯುಸೆಕ್ ನೀರು ನದಿಗೆ ಹರಿಸಲಾಗುತ್ತಿದೆ.105.788 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯ ದ ಜಲಾಶಯ ಈಗಾಗಲೇ ಸಂಪೂರ್ಣ ಭರ್ತಿಯಾಗಿದೆ. ಒಂದು ಲಕ್ಷ ಕ್ಯುಸೆಕ್ ಗೂ ಅಧಿಕ ಒಳಹರಿವು ಇದೆ. ಒಂದೂವರೆ ಲಕ್ಷ ಕ್ಯುಸೆಕ್ ನೀರು ಯಾವುದೇ ಕ್ಷಣದಲ್ಲೂ ನದಿಗೆ ಹರಿಸಲಾಗುವುದು. ಜನ ಮುನ್ನೆಚ್ಚರಿಕೆ ವಹಿಸಬೇಕೆಂದು ಜಲಾಶಯ ಆಡಳಿತ ಮಂಡಳಿ ತಿಳಿಸಿದೆ.