ಮನೆ ರಾಜ್ಯ ಕೇಂದ್ರಕ್ಕೆ ಸಲ್ಲಿಕೆಯಾಗದ ಪರಿಶಿಷ್ಟರ ಮೀಸಲು ಹೆಚ್ಚಳ ಪ್ರಸ್ತಾವ: ಕಾಂಗ್ರೆಸ್’ನಿಂದ ಪ್ರತಿಭಟನೆಗೆ ನಿರ್ಧಾರ- ಡಾ.ಜಿ.ಪರಮೇಶ್ವರ್

ಕೇಂದ್ರಕ್ಕೆ ಸಲ್ಲಿಕೆಯಾಗದ ಪರಿಶಿಷ್ಟರ ಮೀಸಲು ಹೆಚ್ಚಳ ಪ್ರಸ್ತಾವ: ಕಾಂಗ್ರೆಸ್’ನಿಂದ ಪ್ರತಿಭಟನೆಗೆ ನಿರ್ಧಾರ- ಡಾ.ಜಿ.ಪರಮೇಶ್ವರ್

0

ಬೆಂಗಳೂರು: ಪರಿಶಿಷ್ಟರ ಮೀಸಲಾತಿ ಹೆಚ್ಚಳ ಕುರಿತು ರಾಜ್ಯ ಸರ್ಕಾರ ಘೋಷಿಸಿದ್ದರೂ ಈ ಸಂಬಂಧ ಯಾವುದೇ ಪ್ರಸ್ತಾವ ಕೇಂದ್ರಕ್ಕೆ ಸಲ್ಲಿಕೆಯಾಗದಿರುವುದನ್ನು ಖಂಡಿಸಿ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆಗೆ ನಿರ್ಧಾರ ಮಾಡಲಿದೆ ಎಂದು ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಹಿಂದುಳಿದ ವರ್ಗದವರನ್ನ ನಿರಂತರವಾಗಿ ನಿರ್ಲಕ್ಷ್ಯ ಮಾಡಿಕೊಂಡು ಬಂದಿದ್ದಾರೆ. ಇವರನ್ನು ಸಂಪೂರ್ಣವಾಗಿ ಹತ್ತಿಕುವ ಯತ್ನವನ್ನು ಮಾಡುತ್ತಿದ್ದಾರೆ. ಇಂದು ಲೋಕಸಭೆ ಸದನದಲ್ಲಿ ಸಹ ಇಂತಹದ್ದೇ ಸನ್ನಿವೇಶ ನಡೆದಿದೆ. ಹೊಸ ವಿಚಾರ ಗಮನಕ್ಕೆ ಬಂದಿದೆ. ಸಮಾಜ ಕಲ್ಯಾಣ ಸಚಿವರಿಗೆ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ್ದಾರೆ ಎಂದು ವಿವರಿಸಿದರು.

ದಲಿತರಿಗೆ ಮೀಸಲಾತಿ ಹೆಚ್ಚಿಸುತ್ತೇವೆ ಎಂದು ಕರ್ನಾಟಕದಲ್ಲಿ ಘೋಷಣೆ ಮಾಡುತ್ತಾರೆ. ನಾವು ದಲಿತರಿಗೆ ಮೀಸಲಾತಿ ಕೊಟ್ಟಿದ್ದೇವೆ ಎಂದಿದ್ದಾರೆ. ಆದರೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಜನರಿಗೆ ಮೋಸ ಮಾಡಿರುವುದು ಬಯಲಾಗಿದೆ. ಕರ್ನಾಟಕ ಸರ್ಕಾರದಿಂದ ಕೇಂದ್ರಕ್ಕೆ ಮೀಸಲಾತಿ ವಿಚಾರವಾಗಿ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ನಾರಾಯಣಸ್ವಾಮಿ ಸಂಸತ್ ನಲ್ಲಿ ತಿಳಿಸಿದ್ದಾರೆ ಎಂದರು.

ಈ ಒಂದು ಮೋಸದ ವಿರುದ್ಧ ಧ್ವನಿ ಎತ್ತಬೇಕು ಎಂದು ರಾಜ್ಯದ ದಲಿತ ಸಮುದಾಯಕ್ಕೆ ಮನವಿ ಮಾಡುತ್ತೇನೆ. ನಾವು ಈ ವಿಚಾರ ಮುಂದಿಟ್ಟು ರಾಜ್ಯದ್ಯಂತ ಪ್ರತಿಭಟನೆ ಮಾಡಬೇಕು. ಇದು ನಮ್ಮ ಹಕ್ಕಿನ ಪ್ರಶ್ನೆ. ಕನ್ನಡಿಗರ ನಮಗೆ ಸಿಗಬೇಕಾದ ಮೀಸಲಾತಿಯ ಪ್ರಶ್ನೆ. ಹಾಗಾಗಿ ಬಸವರಾಜ್ ಬೊಮ್ಮಾಯಿ ನೀಡಿದ ಹೇಳಿಕೆಗೆ ಅಥವಾ ಪ್ರಧಾನಿ ಪ್ರತಿಕ್ರಿಯೆ ನೀಡಿಲ್ಲ. ಇಡೀ ರಾಜ್ಯದ್ಯಂತ ವಿಚಾರ ಮುಂದಿಟ್ಟು ನಾವು ಹೋರಾಟ ನಡೆಸಬೇಕಿದ್ದು ಇಂದು ಸಂಜೆಯೊಳಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

ಹಿಂದಿನ ಲೇಖನಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ನಿಂದ ಅನಾವಶ್ಯಕ ಗೊಂದಲ: ಸಿಎಂ ಬೊಮ್ಮಾಯಿ
ಮುಂದಿನ ಲೇಖನಹಾರನಹಳ್ಳಿ ಚನ್ನಕೇಶವ, ಸೋಮೇಶ್ವರ ದೇವಾಲಯ