ನವದೆಹಲಿ (New Delhi )- ವಾಣಿಜ್ಯ ಬಳಕೆಯ ಅಡುಗೆ ಅನಿಲದ ದರ ಮತ್ತೆ ಹೆಚ್ಚಳವಾಗಿದೆ. ಪ್ರತಿ ಸಿಲಿಂಡರ್‌ಗೆ ಭಾನುವಾರ 102.50 ರೂ. ರಷ್ಟು ಹೆಚ್ಚಳ ಮಾಡಲಾಗಿದೆ. ಮನೆಗಳಲ್ಲಿ ಬಳಸುವ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಎಲ್‌ಪಿಜಿ ಸಿಲಿಂಡರ್ ಬೆಲೆಯು 2355.50 ರೂ.ಗೆ ಏರಿಕೆ ಆಗಿದೆ.
2,253 ರೂ. ಇದ್ದ 19 ಕೆ.ಜಿ. ತೂಕದ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಈಗ 2355.50 ರೂ. ತಲುಪಿದ್ದರೆ, 5 ಕೆ.ಜಿ. ತೂಕದ ಸಿಲಿಂಡರ್‌ಗೆ 655 ರೂ. ತೆರಬೇಕಿದೆ. ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ದರ 2,400 ರೂ. ದಾಟಿದೆ. ಏಪ್ರಿಲ್ 1ರಂದು ವಾಣಿಜ್ಯ ಬಳಕೆ ಎಲ್‌ಪಿಜಿ ದರ ಪ್ರತಿ ಸಿಲಿಂಡರ್‌ಗೆ 250 ರೂ. ರಷ್ಟು ಹೆಚ್ಚಿಸಲಾಗಿತ್ತು.
ವಾಣಿಜ್ಯ ಬಳಕೆಯ ಅಡುಗೆ ಅನಿಲದ ದರವನ್ನು ಪ್ರತಿ ಸಿಲಿಂಡರ್‌ಗೆ ಭಾನುವಾರ 102.50 ರೂ. ರಷ್ಟು ಹೆಚ್ಚಳ ಮಾಡಲಾಗಿದೆ. ಈ ಮೂಲಕ ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಎಲ್‌ಪಿಜಿ ಸಿಲಿಂಡರ್ ಬೆಲೆಯು ₹2355.50ಕ್ಕೆ ಏರಿಕೆ ಆಗಿದೆ.
ಮನೆಗಳಲ್ಲಿ ಬಳಸುವ ಎಲ್‌ಪಿಜಿ ಸಿಲಿಂಡರ್ ಸದ್ಯ 14.2 ಕೆ.ಜಿ. ತೂಕದ ಸಿಲಿಂಡರ್ ದರವು ಬೆಂಗಳೂರಿನಲ್ಲಿ 952 ರೂ. ಇದೆ.