ಮನೆ ರಾಜ್ಯ ಬೆಂ-ಮೈ ಎಕ್ಸ್‌ ಪ್ರೆಸ್‌ ವೇ ನಲ್ಲಿ ಹೆಚ್ಚಿದ ಅಪಘಾತ: ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸುಮಲತಾ

ಬೆಂ-ಮೈ ಎಕ್ಸ್‌ ಪ್ರೆಸ್‌ ವೇ ನಲ್ಲಿ ಹೆಚ್ಚಿದ ಅಪಘಾತ: ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸುಮಲತಾ

0

ಮಂಡ್ಯ:ಬೆಂಗಳೂರು ಮತ್ತು ಮೈಸೂರು ನಡುವಿನ ಸಂಚಾರದ ಸಮಯವನ್ನು ತಗ್ಗಿಸುವ ನಿಟ್ಟಿನಲ್ಲಿ ನಿರ್ಮಾಣ ಮಾಡಲಾಗಿರುವ ಎಕ್ಸ್‌ ಪ್ರೆಸ್‌ ವೇನಲ್ಲಿ ಅಪಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಈ ಬಗ್ಗೆ ಸದನದಲ್ಲೂ ಚರ್ಚೆಯಾಯಿತು.

Join Our Whatsapp Group


ಎಕ್ಸ್‌ ಪ್ರೆಸ್‌ ವೇನಲ್ಲಿ ಅಪಘಾತ ಸಂಖ್ಯೆ ಹೆಚ್ಚಳ ಹಿನ್ನೆಲೆ ಎನ್​​ ಹೆಚ್​ ಐ ಅಧಿಕಾರಿಗಳನ್ನು ಸಂಸದೆ ಸುಮಲತಾ ತರಾಟೆಗೆ​ ತೆಗೆದುಕೊಂಡಿದ್ದಾರೆ.
ಮಂಡ್ಯ ಜಿಲ್ಲಾ ಪಂಚಾಯತ್ ​ನ ಕಾವೇರಿ ಸಭಾಂಗಣದಲ್ಲಿ ನಡೆದ ದಿಶಾ ಸಭೆಯಲ್ಲಿ ಮತನಾಡಿದ ಅವರು ​​ದಿನೇ ದಿನೇ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿವೆ. ಸರಿಯಾದ ಸರ್ವಿಸ್‌ ರಸ್ತೆಗಳಿಲ್ಲ. ಚರಂಡಿ ಕಾಮಗಾರಿಗಳು ಅಲ್ಲಲ್ಲಿ ಇನ್ನು ಬಾಕಿ ಇದೆ ಎಂದು ತರಾಟೆಗೆ ತೆಗೆದುಕೊಂಡರು.
ಅಲ್ಲದೇ ಇದರ ನಡುವೆ ದಿನೇ ದಿನೇ ಅಪಘಾತಗಳಾಗಿ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಮೊನ್ನೆ ಚನ್ನಪಟ್ಟಣದ ಬಳಿ ಒಂದು ಟ್ರಕ್​ನ ದೃಶ್ಯ ನೋಡಿದರೇ ಮೈ ನಡುಗಿಸುತ್ತೆ. ರಸ್ತೆ ಇರುವುದು ಜನರ ಅನುಕೂಲಕ್ಕೆ. ಜನರ ಪ್ರಾಣ ಕಳೆದುಕೊಳ್ಳುವುದಕ್ಕಲ್ಲ.ಆದಷ್ಟೂ ಬೇಗ ಹೆದ್ದಾರಿ ಸಮಸ್ಯೆಗಳನ್ನು ಸರಿಪಡಿಸಿ.ಇಲ್ಲವಾದರೆ ನಿಮ್ಮ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಬೆಂಗಳೂರು ಮೈಸೂರು ಹೆದ್ದಾರಿ ಕುರಿತಂತೆ ಜನರಿಂದ ಟೋಲ್ ಸಂಗ್ರಹಣೆ ಮಾಡಲಾಗುತ್ತಿತ್ತು, ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡುವ ಸಂದರ್ಭದಲ್ಲಿ ಒಪ್ಪಿಕೊಂಡಿರುವ ಎಲ್ಲಾ ಕಾಮಗಾರಿಗಳು ಹಾಗೂ ಸೌಲಭ್ಯಗಳನ್ನು ಒದಗಿಸಬೇಕು. ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕುರಿತಂತೆ ಚರ್ಚಿಸಲಾಗಿರುವ ವಿಷಯಗಳ ಬಗ್ಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ನೀಡುವಂತೆ ಎನ್‌ಹಚ್‌ಎ.ಐ ಪಿ.ಡಿ ಅವರಿಗೆ ತಿಳಿಸಿದರು.
ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಜಲ ಜೀವನ್ ಮಿಷನ್ ಯೋಜನೆಯಡಿ 3 ಹಂತದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ.ಕೆಲವು ಕಾಮಗಾರಿಗಳನ್ನು ಗುತ್ತಿಗೆದಾರರು ಪೂರ್ಣಗೊಳಿಸದೇ ಅರ್ಧಕ್ಕೆ ಬಿಟ್ಟಿರುವವರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದರು.
ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ಜಲ ಜೀವನ್ ಯೋಜನೆಗೆ ಸಂಬಂಧಿಸಿದಂತೆ ಎರಡು ಪೈಪ್ ಲೈನ್ ಇರುವ ಬಗ್ಗೆ ಚರ್ಚಿಸಿದಾಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮಾತನಾಡಿ ಜಲ್ ಜೀವನ್ ಮಿಷನ್ ಮುಂದಿನ 30 ವರ್ಷಗಳ ಅವಧಿಗೆ ಆಯೋಜಿಸಲಾಗುತ್ತದೆ. ಕೆಲವು ಹಿಂದೆ ನಿರ್ಮಿಸಿರುವ ಪೈಪ್ ಲೈನ್ ಹಳೆಯದಾಗಿದ್ದು, ಯೋಜನೆಗೆ ಅನುಗುಣವಾಗಿ ನೀರು ಸರಬರಾಜು ಮಾಡುವುದು ಕಷ್ಟಕರವಾಗಿರುತ್ತದೆ ಎಂದು ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ಡಾ.ಕುಮಾರ ಅವರು ಮಾತನಾಡಿ ಈಗಾಗಲೇ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು ಪರಿಶೀಲಿಸಿದ ಸಂದರ್ಭದಲ್ಲಿ ಮುಖ್ಯವಾಗಿ ಲೇನ್ ವೇಗ,ಸೂಚನಾ ಫಲಕ ಅಳವಡಿಸುವಂತೆ ತಿಳಿಸಲಾಗಿದೆ ಹಾಗೂ 1525 ಬೀದಿ ದೀಪ‌ದ ಅವಶ್ಯಕತೆ ಇದ್ದು ಕೇವಲ 850 ಮಾತ್ರ ಅಳವಡಿಸಲಾಗಿದೆ. ಹೈ-ವೇ ಪ್ಯಾಟ್ರೋಲಿಂಗ್,ಆಂಬ್ಯುಲೆನ್ಸ್ ಹಾಗೂ ಕ್ರೇನ್ ಗಳ ಸಂಖ್ಯೆ ಹೆಚ್ಚಳ ಮಾಡುವಂತೆ ತಿಳಿಸಲಾಗಿದೆ ಎಂದರು.
ಮಳೆಯ ಕೊರತೆ ಉಂಟಾದರೆ ಹಾಲಿ ಬೆಳೆಗೆ ನೀರು ಒದಗಿಸುವ ಬಗ್ಗೆ ಹಾಗೂ ಕುಡಿಯುವ ನೀರಿನ ಬಗ್ಗೆ ಸಂಸದರು ಮಾಹಿತಿ ಕೇಳಿದಾಗ ಕಾವೇರಿ ನೀರಾವರಿ ನಿಗಮ ನಿಯಮಿತದ ಅಧೀಕ್ಷಕ ಇಂಜಿನಿಯರ್ ರಘುರಾಮ್ ಅವರು ಮಾತನಾಡಿ ಸದರಿ ಪರಿಸ್ಥಿತಿಯಲ್ಲಿ ಮಳೆಯ ಅಭಾವ ಉಂಟಾದರೆ ಜುಲೈ‌ ಅಂತ್ಯದವರೆಗೆ ಮಾತ್ರ ಬೆಳೆಗಳಿಗೆ ನೀರು ಒದಗಿಸಲು ಸಾಧ್ಯ. ನೀರಾವರಿ ಸಲಹಾ ಸಮಿತಿಗೆ ಮಾಹಿತಿ ನೀಡಲು ಕೃಷಿ, ನೀರಾವರಿ ಹಾಗೂ ಕಂದಾಯ ಇಲಾಖೆ ಒಟ್ಟಿಗೆ ಸಮೀಕ್ಷೆ ನಡೆಸಿ ವರದಿ ನೀಡಲಿದೆ ಎಂದರು.
ಸಭೆಯಲ್ಲಿ ಮಂಡ್ಯ ಶಾಸಕ ರವಿಕುಮಾರ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಅರಣ್ಯ ಅಧಿಕಾರಿ ರುದ್ರನ್ ಉಪಸ್ಥಿತರಿದ್ದರು.