ಮನೆ ರಾಜ್ಯ ಹೆಚ್ಚಾದ ಬಿಸಿಲು – ಉ.ಕರ್ನಾಟಕದ 4 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

ಹೆಚ್ಚಾದ ಬಿಸಿಲು – ಉ.ಕರ್ನಾಟಕದ 4 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

0

ಬೆಂಗಳೂರು : ಬಿಸಿಲಿನ ತಾಪಮಾನ ಹೆಚ್ಚಾಗಿರುವುದಿಂದ ಉತ್ತರ ಕರ್ನಾಟಕ ಭಾಗದ ನಾಲ್ಕು ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ನೌಕರರು ಕರ್ತವ್ಯ ನಿರ್ವಹಿಸುವಲ್ಲಿ ತೊಂದರೆ ಎದುರಿಸುತ್ತಿದ್ದಾರೆ.

ಹೀಗಾಗಿ ಮಾನವೀಯ ದೃಷ್ಟಿಯಿಂದ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬೆಳಿಗ್ಗೆ 8ರಿಂದ ಮಾಧ್ಯಾಹ್ನ 1:30ರವರೆಗೆ ಕಚೇರಿಗಳಲ್ಲಿ ಕೆಲಸ ನಿರ್ವಹಿಸಲು ಸೂಚಿಸಲಾಗಿದೆ. ಇದರ ಹೊರತಾಗಿ ತುರ್ತು ಸಂದರ್ಭಗಳಲ್ಲಿ ಸಮಯದ ಪರಿವೇ ಇಲ್ಲದಂತೆ ಕೆಲಸ ಮಾಡಬೇಕು. ಸಾಮಾನ್ಯ ಸಂದರ್ಭಗಳಲ್ಲಿ ಮಾತ್ರ ಕೆಲಸದ ವೇಳೆಯಲ್ಲಿ ಬದಲಾವಣೆ ಮಾಡಲಾಗಿದೆ. ಇದು ಸಮಯ ಬದಲಾವಣೆ ವೇಳಾಪಟ್ಟಿ ಕೇವಲ ಏಪ್ರಿಲ್, ಮೇ ತಿಂಗಳಿಗೆ ಮಾತ್ರ ಅನ್ವಯವಾಗಲಿದೆ ಎಂದು ತಿಳಿಸಿದೆ.

ಈ ಎಲ್ಲಾ ಜಿಲ್ಲೆಗಳಲ್ಲಿನ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ಎಂದಿನಂತೆ ಯಾವುದೇ ಲೋಪ/ಅಡೆತಡೆಯಿಲ್ಲದೆ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು. ಸಾರ್ವಜನಿಕರಿಗೆ ಯಾವುದೇ ಅನಾನುಕೂಲತೆಯಾಗದಂತೆ ಮತ್ತು ಜಿಲ್ಲಾಧಿಕಾರಿಗಳು/ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಸಮಯದ ಪರಿಮಿತಿಯಿಲ್ಲದೆ ಕರ್ತವ್ಯ ನಿರ್ವಹಿಸಬೇಕು ಎಂದಿದೆ.