ಮನೆ ರಾಜ್ಯ ಮಂಗಳೂರಿನಲ್ಲಿ ಹೆಚ್ಚಿದ ನೀರಿನ ಸಮಸ್ಯೆ: ಕಟ್ಟಡ ಕಾಮಗಾರಿ, ವೆಹಿಕಲ್ ವಾಶ್ ನಿಷೇಧ

ಮಂಗಳೂರಿನಲ್ಲಿ ಹೆಚ್ಚಿದ ನೀರಿನ ಸಮಸ್ಯೆ: ಕಟ್ಟಡ ಕಾಮಗಾರಿ, ವೆಹಿಕಲ್ ವಾಶ್ ನಿಷೇಧ

0

ಮಂಗಳೂರು: ಮಂಗಳೂರು ನಗರ ಹಾಗೂ ಸುತ್ತಾಮುತ್ತಲಿನ ಪ್ರದೇಶಗಳಿಗೆ ನೀರು ಪೂರೈಸುವ ತುಂಬೆ ಡ್ಯಾಂನಲ್ಲಿ  ನಿರಂತರವಾಗಿ ನೀರು ಕಡಿಮೆಯಾಗುತ್ತಿದ್ದು, ಈ ಸಂಬಂಧ ಜಿಲ್ಲಾಡಳಿತ ಸಭೆ ನಡೆಸಿ ಕೆಲವು ತೀರ್ಮಾನಗಳನ್ನು ತೆಗೆದುಕೊಂಡಿದೆ.

Join Our Whatsapp Group

ನೇತ್ರಾವತಿ ನದಿಯ ನೀರಿನ ಒಳಹರಿವು ಈಗಾಗಲೇ ನಿಂತಿರುವುದರಿಂದ ಮತ್ತು ಬೇಸಿಗೆ ಬಿರು ಬಿಸಿಲಿನಿಂದಾಗಿ ಮಂಗಳೂರು ನಗರ ಪಾಲಿಕೆಯ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿಯುತ್ತಿದೆ.

ಸಾರ್ವಜನಿಕರಿಗೆ ಈ ಬೇಸಿಗೆಯ ಅಂತ್ಯದವರೆಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ತೊಂದರೆಯಾಗದಂತೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೇ 4 ರಿಂದ ರೇಷನಿಂಗ್ ಮೂಲಕ ನೀರು ಸರಬರಾಜು ಮಾಡುವುದು ಅನಿವಾರ್ಯವಾಗಿದೆ.

ಜಿಲ್ಲಾಡಳಿತ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು

ಲಭ್ಯವಿರುವ ನೀರನ್ನು ಮಂಗಳೂರು ನಗರ ಪ್ರದೇಶಕ್ಕೆ (ಮಂಗಳೂರು ನಗರ ದಕ್ಷಿಣ) ಮತ್ತು ಸುರತ್ಕಲ್ ಪ್ರದೇಶಕ್ಕೆ (ಮಂಗಳೂರು ನಗರ ಉತ್ತರ ಭಾಗಕ್ಕೆ) ಪರ್ಯಾಯ ದಿನಗಳಲ್ಲಿ ನೀರು ಬಿಡಲು ನಿರ್ಣಯಿಸಲಾಗಿದೆ.

ಕಟ್ಟಡ ರಚನೆ, ಇತರ ನಿರ್ಮಾಣ ಕಾಮಗಾರಿಗಳು ಹಾಗೂ ವಾಹನ ತೊಳೆಯುವ ಸರ್ವಿಸ್ ಸೆಂಟರ್ ಗಳ ಜೋಡಣೆಯನ್ನು ಮುಂದಿನ ಸೂಚನೆಯವರೆಗೆ ಕಡಿತಗೊಳಿಸುವುದು.

ಸಾರ್ವಜನಿಕರು ನೀರನ್ನು ಅನಾವಶ್ಯಕವಾಗಿ ಪೋಲು ಮಾಡುವುದು ಕಂಡು ಬಂದಲ್ಲಿ ಯಾವುದೇ ಸೂಚನೆ ನೀಡದೆ, ಜೋಡಣೆ ಕಡಿತಗೊಳಿಸುವುದು.

ಮೇ 5ರಂದು ಮಂಗಳೂರು ನಗರ ಉತ್ತರಕ್ಕೆ, ಮೇ 6 ರಂದು ಮಂಗಳೂರು ನಗರ ದಕ್ಷಿಣ, ನಂತರ ಕ್ರಮಾನುಗತವಾಗಿ ಮೇಲೆ ತಿಳಿಸಿದಂತೆ ನೀರು ಪೂರೈಕೆ ಮಾಡಲು ನಿರ್ಧರಿಸಲಾಗಿರುತ್ತದೆ.

ಲಭ್ಯವಿರುವ ನೀರನ್ನು ಮೇಲೆ ತಿಳಿಸಿದಂತೆ ಪೂರೈಕೆ ಮಾಡುವುದು ಅನಿವಾರ್ಯವಾಗಿದ್ದು ಸಾರ್ವಜನಿಕರು ಮೇಲಿನ ವಿಷಯವನ್ನು ಮನಗಂಡು ಮಹಾನಗರ ಪಾಲಿಕೆಯೊಂದಿಗೆ ಸಹಕರಿಸುವಂತೆ ಪಾಲಿಕೆಯ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.