ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಅಸಭ್ಯವಾಗಿ ಕಾಮೆಂಟ್ ಮಾಡಿದ್ದ ಐದು ಯೂಟ್ಯೂಬ್ ಚಾನೆಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ವಿಜಯಲಕ್ಷ್ಮಿ ಬಗ್ಗೆ ಯೂಟ್ಯೂಬ್ ಚಾನೆಲ್‌ವೊಂದು ಕಾರ್ಯಕ್ರಮ ಮಾಡಿತ್ತು. ಈ ಕಾರ್ಯಕ್ರಮದ ವಿಡಿಯೋಗೆ ಕೆಲವರು ವಿಜಯಲಕ್ಷ್ಮಿ ಬಗ್ಗೆ ಅಶ್ಲೀಲವಾಗಿ ಕಾಮೆಂಟ್ ಮಾಡಿದ್ದರು.
ಈ ಸಂಬಂಧ ವ್ಯಕ್ತಿಯೊಬ್ಬರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಮಹಿಳಾ ಆಯೋಗವು ಪೊಲೀಸ್ ಕಮೀಷನರ್‌ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತ್ತು.
ಈ ದೂರು ಪರಿಶೀಲನೆ ನಡೆಸಿದ ಸಿಕೆ ಅಚ್ಚುಕಟ್ಟು ಪೊಲೀಸರು BNS ಸೆಕ್ಷನ್ 75, 79 ಹಾಗೂ ಐಟಿ ಆ್ಯಕ್ಟ್ 67, 66 ಅಡಿ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಐದು ಯೂಟ್ಯೂಬ್ ಚಾನೆಲ್‌ಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಆರಂಭಿಸಿದ್ದಾರೆ.















