ಮೈಸೂರು(Mysuru): ನಗರದ ಶಕ್ತಿಧಾಮದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವದ ಕಾರ್ಯಕ್ರಮದಲ್ಲಿ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ದಂಪತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಧ್ವಜಾರೋಹಣ ನೆರವೇರಿಸಿ, ರಾಷ್ಟ್ರನಾಯಕರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.
ಶಕ್ತಿಧಾಮದ ಚಿಣ್ಣರು ವಿವಿಧ ವೇಷಭೂಷಣ ಧರಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಇದೇ ವೇಳೆ ಮಾಜಿಯೋಧ ರಮೇಶ್ ರವರು ವಿಧ್ಯಾರ್ಥಿನಿಯರೊಂದಿಗೆ ದೇಶಸೇವೆ ಮಾಡಿದ ಅನುಭವವನ್ನು ಹಂಚಿಕೊಂಡರು.
ಕಾರ್ಯಕ್ರಮಕ್ಕೂ ಮುನ್ನ ಅತಿಥಿಗಳನ್ನ ಆತ್ಮೀಯವಾಗಿ ಬರಮಾಡಿಕೊಂಡರು.