ಮನೆ ಕ್ರೀಡೆ ಇಂಗ್ಲೆಂಡ್‌ ವಿರುದ್ಧದ ಸೆಮಿಫೈನಲ್‌ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಪ್ರಕಟ

ಇಂಗ್ಲೆಂಡ್‌ ವಿರುದ್ಧದ ಸೆಮಿಫೈನಲ್‌ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಪ್ರಕಟ

0

ಬರ್ಮಿಂಗ್‌ಹ್ಯಾಮ್‌ (Birmingham): ಕಾಮನ್‌ವೆಲ್ತ್‌ ಗೇಮ್ಸ್‌ ಕ್ರೀಡಾಕೂಟದಲ್ಲಿ ಇದೇ ಮೊದಲ ಬಾರಿ ಮಹಿಳಾ ಟಿ20 ಕ್ರಿಕೆಟ್‌ ಟೂರ್ನಿಯನ್ನು ಸೇರಿಸಲಾಗಿದ್ದು, ಪದಕ ಗೆಲ್ಲುವ ಫೇವರಿಟ್‌ ತಂಡಗಳಾದ ಭಾರತ ಮತ್ತು ಇಂಗ್ಲೆಂಡ್‌ ತಂಡಗಳು ಇದೀಗ ಸೆಮಿಫೈನಲ್‌ ಕದನದಲ್ಲಿ ಪೈಪೋಟಿ ನಡೆಸಲಿವೆ. 

ಇದೀಗ ಸಂಭಾವ್ಯ ತಂಡ ಪ್ರಕಟಗೊಂಡಿದೆ. ಪದಕ ಗೆಲ್ಲುವ ಫೇವರಿಟ್‌ ತಂಡಗಳಲ್ಲಿ ಒಂದಾಗಿದ್ದ ಭಾರತ ಮಹಿಳಾ ಕ್ರಿಕೆಟ್‌ ತಂಡ, ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಆಡಿದ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಎದುರು 3 ವಿಕೆಟ್‌ಗಳ ಸೋಲುಂಡಿತು. ಆದರೆ, ನಂತರದ ಎರಡು ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದೆ. ಮೊದಲಿಗೆ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಎದುರು 8 ವಿಕೆಟ್‌ಗಳ ಜಯ ದಾಖಲಿಸಿದ ಭಾರತ ತಂಡ ಬಳಿಕ ಬಾರ್ಬೇಡೋಸ್‌ ತಂಡವನ್ನು 100 ರನ್‌ಗಳಿಂದ ಬಗ್ಗುಬಡಿದು ‘ಎ’ ಗುಂಪಿನಲ್ಲಿ ಎರಡನೇ ಸ್ಥಾನಿಯಾಗಿ ಸೆಮಿಫೈನಲ್‌ಗೆ ಅರ್ಹತೆ ಪಡೆಯಿತು.

ಭಾರತದ ಸಂಭಾವ್ಯ XI
ಶಫಾಲಿ ವರ್ಮಾ, ಸ್ಮೃತಿ ಮಂಧಾನಾ, ಜೆಮಿಮಾ ರೊಡ್ರಿಗಸ್‌, ಹರ್ಮನ್‌ಪ್ರೀತ್‌ ಕೌರ್‌ (ನಾಯಕ), ತಾನಿಯಾ ಭಾಟಿಯಾ (ವಿಕೆಟ್‌ಕೀಪರ್‌), ದೀಪ್ತಿ ಶರ್ಮಾ, ಪೂಜಾ ವಸ್ತ್ರಕಾರ್, ರಾಧಾ ಯಾದವ್‌, ಸ್ನೇಹಾ ರಾಣಾ, ಮೇಘಾ ಸಿಂಗ್‌, ರೇಣುಕಾ ಸಿಂಗ್‌.

ಎಜ್‌ಬಾಸ್ಟನ್‌ ಕ್ರೀಡಾಂಗಣದಲ್ಲಿ ಶನಿವಾರ (ಆಗಸ್ಟ್‌ 6) ನಡೆಯಲಿರುವ ಪಂದ್ಯದಲ್ಲಿ ಗೆಲ್ಲುವ ತಂಡಕ್ಕೆ ಚಿನ್ನ ಅಥವಾ ಬೆಳ್ಳಿ ಪದಕ ಖಾತ್ರಿಯಾಗಲಿದೆ. ಸೋಲುವ ತಂಡ ಮತ್ತೊಂದು ಪಂದ್ಯದಲ್ಲಿ ಮುಗ್ಗರಿಸುವ ತಂಡದ ಎದುರು ಕಂಚಿನ ಪದಕಕ್ಕಾಗಿ ಕಾದಾಟ ನಡೆಸುವಂತ್ತಾಗುತ್ತದೆ. ಮತ್ತೊಂದು ಸೆಮಿಫೈನಲ್‌ ಪಂದ್ಯದಲ್ಲಿಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ ತಂಡಗಳು ಕಾದಾಟ ನಡೆಸಲಿವೆ.

ಪಂದ್ಯದ ವಿವರ: ಭಾರತ ಮಹಿಳಾ ತಂಡ vs ಇಂಗ್ಲೆಂಡ್‌ ಮಹಿಳಾ ತಂಡ
ಸ್ಥಳ: ಎಜ್‌ಬಾಸ್ಟನ್ ಕ್ರೀಡಾಂಗಣ, ಬರ್ಮಿಂಗ್‌ಹ್ಯಾಮ್‌
ಪಂದ್ಯ ಆರಂಭ: ಮಧ್ಯಾಹ್ನ 3:30 (ಭಾರತೀಯ ಕಾಲಮಾನ).