ತೆಲಂಗಾಣ(Telangana): ಹೈದರಾಬಾದ್‌ನಲ್ಲಿ ಸೆ.25ರಂದು (ಭಾನುವಾರ) ನಡೆಯಲಿರುವ ಭಾರತ-ಆಸ್ಟ್ರೇಲಿಯಾ ನಡುವಿನ ಮೂರನೇ ಟಿ20 ಪಂದ್ಯಕ್ಕೆ ಟಿಕೆಟ್ ಖರೀದಿಸಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರಿಂದ ಮೈದಾನದ ಹೊರಗಡೆ ಕಾಲ್ತುಳಿತ ಸಂಭವಿಸಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ –ಆಸ್ಟ್ರೇಲಿಯಾ ನಡುವೆ ಮೂರನೇ ಹಾಗೂ ಅಂತಿಮ ಟಿ20 ಪಂದ್ಯ ನಡೆಯಲಿದೆ. ವಾರಾಂತ್ಯದ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಜನರು ಟಿಕೆಟ್ ಖರೀದಿಸಲು ಕ್ರೀಡಾಂಗಣದತ್ತ ಮುಖ ಮಾಡುತ್ತಿದ್ದಾರೆ. ಟಿಕೆಟ್ ಖರೀದಿಗಾಗಿ ಅಭಿಮಾನಿಗಳು ಸರತಿ ಸಾಲಿನಲ್ಲಿ ಕಾದು ನಿಂತಿರುವ ದೃಶ್ಯಗಳು ಬುಧವಾರ ಕಂಡು ಬಂದಿತ್ತು.
ಸದ್ಯ ಕ್ರೀಡಾಂಗಣದಲ್ಲಿ ನೆರೆದಿದ್ದ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದು, ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Saval TV on YouTube