ಮನೆ ಆರೋಗ್ಯ ಕೋವಿಡ್: ನೂತನ 843 ಪ್ರಕರಣಗಳು ಧೃಡ

ಕೋವಿಡ್: ನೂತನ 843 ಪ್ರಕರಣಗಳು ಧೃಡ

0


ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ  843 ಕೋವಿಡ್  ಪ್ರಕರಣಗಳು ಧೃಡಪಟ್ಟಿವೆ.


ಇದು ಕಳೆದ 126 ದಿನಗಳಲ್ಲಿ ಒಂದು ದಿನದಲ್ಲಿ ದಾಖಲಾದ ಅತ್ಯಧಿಕ ಪ್ರಕರಣಗಳ ಸಂಖ್ಯೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದುಬಂದಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 5,389ಕ್ಕೆ ಏರಿಕೆಯಾಗಿದೆ.
ಈವರೆಗೆ ದೇಶದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 4.46 ಕೋಟಿಗೆ (4,46,94,349) ಏರಿದೆ.

ಇಂದು 4 ಮಂದಿ ಮೃತಪಟ್ಟಿದ್ದು, ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,30,799ರಷ್ಟಾಗಿದೆ.

ಜಾರ್ಖಂಡ್ ಮತ್ತು ಮಹಾರಾಷ್ಟ್ರದಲ್ಲಿ ತಲಾ ಒಬ್ಬರು ಹಾಗೂ ಕೇರಳದಲ್ಲಿ ಇಬ್ಬರು ಕೋವಿಡ್‌’ನಿಂದ ಅಸುನೀಗಿದ್ದಾರೆ.

ಒಟ್ಟು ಸೋಂಕಿತ ಪ್ರಕರಣಗಳ ಪೈಕಿ ಶೇಕಡ 0.01ರಷ್ಟು ಸಕ್ರಿಯ ಪ್ರಕರಣಗಳಿವೆ. ಚೇತರಿಕೆ ದರ ಶೇಕಡ 98.80ರಷ್ಟಿದೆ.

ಹಿಂದಿನ ಲೇಖನಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿ ಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಮಧ್ಯಂತರ ತಡೆ ವಿಸ್ತರಿಸಿದ ಹೈಕೋರ್ಟ್
ಮುಂದಿನ ಲೇಖನಸಿದ್ದರಾಮಯ್ಯ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಗೆಲ್ಲಲ್ಲ: ಆರ್ ಅಶೋಕ್