ನವದೆಹಲಿ(Newdelhi): ವಿಶ್ವದಲ್ಲಿಯೇ ಐದನೇ ಅತಿದೊಡ್ಡ ಆರ್ಥಿಕತೆಯಾಗಿ ಭಾರತ ಹೊರಹೊಮ್ಮಿದೆ.
ಬ್ಲೂಮ್‌ಬರ್ಗ್ ವರದಿ ಪ್ರಕಾರ, ವಿಶ್ವದ ಅತಿದೊಡ್ಡ ಆರ್ಥಿಕತೆಯ ಪೈಕಿ ಭಾರತಕ್ಕಿಂತಲೂ ಹಿಂದೆ ಬಿದ್ದಿರುವ ಬ್ರಿಟನ್ 6ನೇ ಸ್ಥಾನಕ್ಕೆ ಕುಸಿದಿದೆ ಎಂದು ಹೇಳಿದೆ.
2021ನೇ ಸಾಲಿನ ಕೊನೆಯ ಮೂರು ತಿಂಗಳಲ್ಲಿ ಬ್ರಿಟನ್ ಹಿಂದಿಕ್ಕಿರುವ ಭಾರತ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿ ಬೆಳೆದಿದೆ. ಈ ಅಂಕಿಅಂಶವು ಅಮೆರಿಕನ್ ಡಾಲರ್ ಆಧರಿಸಿದೆ. ಅಂತರರಾಷ್ಟ್ರೀಯ ಹಣಕಾಸು ನಿಧಿಯ ಜಿಡಿಪಿ ಅಂಕಿಅಂಶಗಳ ಪ್ರಕಾರ ಮೊದಲ ತ್ರೈಮಾಸಿಕದಲ್ಲೂ ಭಾರತ ತನ್ನ ಮುನ್ನಡೆಯನ್ನು ವಿಸ್ತರಿಸಿದೆ.
ಅಮೆರಿಕ, ಚೀನಾ, ಜಪಾನ್ ಮತ್ತು ಜರ್ಮನಿ ನಂತರದ ಸ್ಥಾನದಲ್ಲಿ ಭಾರತ ಗುರುತಿಸಿಕೊಂಡಿದೆ. ದಶಕದ ಹಿಂದೆ ಭಾರತ 11ನೇ ಹಾಗೂ ಬ್ರಿಟನ್ 5ನೇ ಸ್ಥಾನದಲ್ಲಿತ್ತು ಎಂಬುದು ಗಮನಾರ್ಹ.
ಅಲ್ಲದೆ ಪ್ರಸಕ್ತ ಸಾಲಿನಲ್ಲಿ ಭಾರತದ ಆರ್ಥಿಕತೆ ಶೇ 7ಕ್ಕಿಂತಲೂ ಹೆಚ್ಚು ಪ್ರಗತಿ ಸಾಧಿಸುವ ನಿರೀಕ್ಷೆಯಿದೆ. ಇದರಿಂದಾಗಿ ನೂತನ ಪ್ರಧಾನಿಗೆ ಮತ್ತಷ್ಟು ಸವಾಲು ಎದುರಾಗಲಿದೆ.