ಭಾರತೀಯ ಅಂಚೆ ಇಲಾಖೆಯಲ್ಲಿ ಅಸಿಸ್ಟೆಂಟ್ ಡೈರೆಕ್ಟರ್, ಸೀನಿಯರ್ ಟ್ರಾನ್ಸ್ಲೇಶನ್ ಆಫೀಸರ್ ಹುದ್ದೆಗಳು ಖಾಲಿ ಇವೆ. ಆಸಕ್ತರು ಕೂಡಲೇ ತಮ್ಮ ರೆಸ್ಯೂಮ್ ಇ-ಮೇಲ್ ಮಾಡಿ. ಡಿಸೆಂಬರ್ 12, 2022 ಅರ್ಜಿ ಹಾಕಲು ಕೊನೆಯ ದಿನವಾಗಿದೆ.
ಹುದ್ದೆಯ ಮಾಹಿತಿ:
ಅಸಿಸ್ಟೆಂಟ್ ಡೈರೆಕ್ಟರ್/ ಡೆಸ್ಕ್ ಆಫೀಸರ್-1
ಅಸಿಸ್ಟೆಂಟ್ ಡೈರೆಕ್ಟರ್-1
ಸೀನಿಯರ್ ಟ್ರಾನ್ಸ್ಲೇಶನ್ ಆಫೀಸರ್-2
ಶೈಕ್ಷಣಿಕ ಅರ್ಹತೆ ಏನಿರಬೇಕು?
ಅಸಿಸ್ಟೆಂಟ್ ಡೈರೆಕ್ಟರ್/ ಡೆಸ್ಕ್ ಆಫೀಸರ್-ಪದವಿ
ಅಸಿಸ್ಟೆಂಟ್ ಡೈರೆಕ್ಟರ್- ಪದವಿ, ಸ್ನಾತಕೋತ್ತರ ಪದವಿ
ಸೀನಿಯರ್ ಟ್ರಾನ್ಸ್ಲೇಶನ್ ಆಫೀಸರ್-ಪದವಿ, ಸ್ನಾತಕೋತ್ತರ ಪದವಿ
ವಯೋಮಿತಿ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 65 ವರ್ಷ ಮೀರಿರಬಾರದು.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ರೆಸ್ಯೂಮ್ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ pe2section.dte@indiapost.gov.in ಗೆ ಡಿಸೆಂಬರ್ 12ಕ್ಕೂ ಮುನ್ನ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 18/11/2022
ಇ-ಮೇಲ್ ಮಾಡಲು ಕೊನೆಯ ದಿನ: 12/12/2022















