ಇಂದು ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ದಸುನ್ ಶನಕ ನೇತೃತ್ವದ ಶ್ರೀಲಂಕಾ ತಂಡ ಇಂದು ಏಷ್ಯಾಕಪ್ ಫೈನಲ್ ನಲ್ಲಿ ಮುಖಾಮುಖಿ ಆಗುತ್ತಿದೆ. ಎರಡು ಬಲಿಷ್ಠ ತಂಡದಗಳ ನಡುವಣ ಕಾದಾಟಕ್ಕೆ ಅಭಿಮಾನಿಗಳು ಕಾದುಕುಳಿತಿದ್ದಾರೆ. ಏಷ್ಯಾ ಕಪ್ ಟ್ರೋಫಿ ಗೆಲ್ಲಲು ಎರಡು ತಂಡಗಳು ಸಜ್ಜಾಗಿದೆ.
ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ ಏಷ್ಯಾಕಪ್ ಫೈನಲ್ ಪಂದ್ಯ ನಡೆಯಲಿದ್ದು, ಪಂದ್ಯ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ. ಏಷ್ಯಾಕಪ್ ಫೈನಲ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ನ ಚಾನೆಲ್ ನ ವಿವಿದ ಭಾಷೆಗಳಲ್ಲಿ ಮತ್ತು ಡಿಡಿ ಸ್ಪೋರ್ಟ್ಸ್ ನಲ್ಲಿ ಟಿವಿಯಲ್ಲಿ ವೀಕ್ಷಿಸಬಹುದು.
ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಜಸ್ಪ್ರೀತ್ ಬುಮ್ರಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ , ಪ್ರಸಿದ್ಧ ಕೃಷ್ಣ, ತಿಲಕ್ ವರ್ಮ.
ಶ್ರೀಲಂಕಾ: ದಸುನ್ ಶನಕ (ನಾಯಕ), ಕುಸಾಲ್ ಮೆಂಡಿಸ್ (ಉಪನಾಯಕ), ಪಾತುಮ್ ನಿಸಂಕ, ದಿಮುತ್ ಕರುಣಾರತ್ನೆ, ಕುಸಲ್ ಜೆನಿತ್ ಪೆರೇರಾ, ಚರಿತ್ ಅಸಲಂಕಾ, ಧನಂಜಯ್ ಡಿ ಸಿಲ್ವ, ಮತಿಶ ಪತಿರಾನ, ಸದಿರ ಸಮರವಿಕ್ರಮ, ಮಹಿಷ್ ತೀಕ್ಷಣ, ದುನಿತ್ ವೆಲ್ಲೇಜ್, ಕಸುನ್ ರಜಿತ, ಫೆರ್ನಾಂಡೊ ಮತ್ತು ಪ್ರಮೋದ್ ಮಧುಶನ್.