ಸೇಂಟ್ ಕಿಟ್ಸ್ (St Kitts): ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ20 ಪಂದ್ಯ ಇಂದು ನಡೆಯಲಿದೆ. ಆದರೆ ಲಗೇಜ್ ಟ್ರಬಲ್ ನಿಂದಾಗಿ ಪಂದ್ಯ ತಡವಾಗಿ ಆರಂಭವಾಗಲಿದೆ.
ಎರಡನೇ ಟಿ20 ಪಂದ್ಯಕ್ಕೆ ಲಗೇಜ್ ಟ್ರಬಲ್ ಎದುರಾಗಿದೆ. ತಂಡಗಳ ಲಗೇಜ್ ನಿಗದಿತ ಸಮಯಕ್ಕೆ ಮೈದಾನಕ್ಕೆ ಸೇರದ ಹಿನ್ನೆಲೆಯಲ್ಲಿ ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಆರಂಭವಾಗಬೇಕಿದ್ದ ಪಂದ್ಯ, ರಾತ್ರಿ 10: 00ಕ್ಕೆ(ಭಾರತೀಯ ಕಾಲಮಾನ) ಆರಂಭವಾಗಲಿದೆ.
ಮೊದಲನೇ ಟಿ20 ಪಂದ್ಯದ 68 ರನ್‌ಗಳ ಭರ್ಜರಿ ಗೆಲುವಿನ ವಿಶ್ವಾಸದಲ್ಲಿರುವ ಟೀಮ್ ಇಂಡಿಯಾ ಅದೇ ವಿಶ್ವಾಸದಲ್ಲಿ 2ನೇ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಈ ಪಂದ್ಯದಲ್ಲಿ ಮತ್ತೊಮ್ಮೆ ಭಾರತ ಗೆಲ್ಲಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.
ಸದ್ಯ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ತಂಡ 1-0 ಮುನ್ನಡೆಯಲ್ಲಿದೆ. ಎರಡು ಮತ್ತು ಮೂರನೇ ಪಂದ್ಯಗಳು ಸೇಂಟ್ ಕಿಟ್ಸ್‌ನಲ್ಲಿ ನಡೆಯಲಿದೆ. ನಂತರ ಕೊನೆಯ 4 ಮತ್ತು 5ನೇ ಪಂದ್ಯಗಳು ಯುಎಸ್‌ಎನಲ್ಲಿ ಜರುಗಲಿವೆ.
ಇತ್ತಂಡಗಳ ಸಂಭಾವ್ಯ ಪ್ಲೇಯಿಂಗ್
ಭಾರತ: ರೋಹಿತ್ ಶರ್ಮಾ (ನಾಯಕ), ರಿಷಬ್ ಪಂತ್ (ವಿ.ಕೀ), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜಾ, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್.
ವೆಸ್ಟ್ ಇಂಡೀಸ್: ಕೈಲ್ ಮೇಯರ್ಸ್, ಬ್ರ್ಯಾಂಡನ್ ಕಿಂಗ್, ನಿಕೋಲಸ್ ಪೂರನ್ (ನಾಯಕ,ವಿ.ಕೀ), ಶಿಮ್ರಾನ್ ಹೆಟ್ಮಾಯೆರ್, ರೋವ್ಮನ್ ಪೊವೆಲ್, ಜೇಸನ್ ಹೋಲ್ಡರ್, ಓಡಿಯನ್ ಸ್ಮಿತ್, ಅಲ್ಝಾರಿ ಜೋಸೆಫ್, ಅಕೀಲ್ ಹೋಸೇನ್, ಒಬೆಡ್ ಮೆಕಾಯ್, ಹೇಡನ್ ವಾಲ್ಷ್.