ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಈಗಾಗಲೇ ಆಡಿರುವ ಎರಡು ಟೆಸ್ಟ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸರಣಿಯಲ್ಲಿ 1-0 ಅಂತರದಿಂದ ಭಾರತ ಗೆದ್ದಿದೆ. ಇದೀಗ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ದ 2-1 ಅಂತರದಿಂದ ಭಾರತ ಗೆದ್ದಿದೆ.
ಆಗಸ್ಟ್ 3ರಿಂದ ಟಿ20 ಆರಂಭವಾಗಲಿದ್ದು, ಭಾರತ ವೆಸ್ಟ್ ಇಂಡೀಸ್ ವಿರುದ್ಧ ಐದು ಟಿ20 ಪಂದ್ಯಗಳನ್ನು ಆಡಲಿದೆ.
ಐದು ಟಿ20 ಪಂದ್ಯಗಳ ಪಟ್ಟಿ ಇಲ್ಲಿದೆ :
- ಮೊದಲ ಟಿ20 ಆಗಸ್ಟ್ 3 – ಬ್ರಿಯನ್ ಲಾರಾ ಸ್ಟೇಡಿಯಂ, ಟ್ರಿನಿಡಾಟ್
- ದ್ವಿತೀಯ ಟಿ20 ಆಗಸ್ಟ್ 6 – ಪ್ರೊವಿಡೆನ್ಸ್ ಸ್ಟೇಡಿಯಂ, ಗಯಾನ
- ತೃತೀಯ ಟಿ20 ಆಗಸ್ಟ್ 8 – ಪ್ರೊವಿಡೆನ್ಸ್ ಸ್ಟೇಡಿಯಂ, ಗಯಾನ
- ನಾಲ್ಕನೇ ಟಿ20 ಆಗಸ್ಟ್ 12 – ಸೆಂಟ್ರಲ್ ಬ್ರೊವರ್ಡ್ ಪಾರ್ಕ್ ಸ್ಟೇಡಿಯಂ, ಫ್ಲೋರಿಡಾ
- ಐದನೇ ಟಿ20 ಆಗಸ್ಟ್ 13 – ಸೆಂಟ್ರಲ್ ಬ್ರೊವರ್ಡ್ ಪಾರ್ಕ್ ಸ್ಟೇಡಿಯಂ, ಫ್ಲೋರಿಡಾ
ವೆಸ್ಟ್ ಇಂಡೀಸ್ ವಿರುದ್ಧ ಆಡಿರುವ ಎರಡು ಸರಣಿಗಳಲ್ಲಿ ಭಾರತ ಗೆದ್ದಿದ್ದು, ಮೂರನೇ ಸರಣಿಯನ್ನು ಗೆಲ್ಲುವ ಕುತೂಹಲದಲ್ಲಿದೆ. ಆಡಿರುವ ಎರಡು ಸರಣಿಗಳಲ್ಲಿ ಸೋತಿರುವ ವೆಸ್ಟ್ ಇಂಡೀಸ್ ಭಾರತವನ್ನು ಮಣಿಸಲು ಸಜ್ಜಾಗಿದೆ.