ಮನೆ ಕ್ರೀಡೆ ಎರಡನೇ ಟಿ20 ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಭಾರತಕ್ಕೆ 33 ರನ್ ಗಳ ಜಯ

ಎರಡನೇ ಟಿ20 ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಭಾರತಕ್ಕೆ 33 ರನ್ ಗಳ ಜಯ

0

ಡಬ್ಲಿನ್ ನಲ್ಲಿ ಭಾನುವಾರ ನಡೆದ ಐರ್ಲೆಂಡ್ ವಿರುದ್ಧದ ಎರಡನೇ ಟಿ-20ಐ ಪಂದ್ಯದಲ್ಲಿ ಭಾರತ 33 ರನ್ ಗಳಿಂದ ಗೆದ್ದು ಮೂರು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ತನ್ನದಾಗಿಸಿಕೊಂಡಿದ್ದಾರೆ.

ಮೊದಲು ಬ್ಯಾಟಿಂಗ್‌ ಮಾಡಿದ ಇಂಡಿಯಾಗೆ ಯಶಸ್ವಿ ಜೈಸ್ವಾಲ್ ಹಾಗೂ ರುತುರಾಜ್ ಗಾಯಕ್ವಾಡ್ ಉತ್ತಮ ಆರಂಭ ಒದಗಿಸಿದರು.

ಮೊದಲ ವಿಕೆಟ್ ಗೆ 29 ರನ್  ಪೇರಿಸಿದ ಬಳಿಕ ಜೈಸ್ವಾಲ್ (18) ಔಟಾದರು. ಆ ಬಳಿಕ ಬಂದ ತಿಲಕ್ ವರ್ಮಾ ಕೇವಲ 1 ರನ್ ಗಳಿಸಿ ನಿರಾಸೆ ಮೂಡಿಸಿದರು. ಇನ್ನು 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ 26 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ 40 ರನ್  ಭರಿಸಿದರು .

ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ರುತುರಾಜ್ ಗಾಯಕ್ವಾಡ್ 43 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 6 ಫೋರ್ ಗಳೊಂದಿಗೆ 58 ರನ್  ಬಾರಿಸಿದರು. ಅಂತಿಮ ಹಂತದಲ್ಲಿ ಅಬ್ಬರಿಸಿದ ರಿಂಕು ಸಿಂಗ್ 21 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ 38 ರನ್  ಚಚ್ಚಿದರೆ, ಶಿವಂ ದುಬೆ 16 ಎಸೆತಗಳಲ್ಲಿ ಅಜೇಯ 22 ರನ್  ಬಾರಿಸಿದರು. ಟೀಮ್ ಇಂಡಿಯಾ ಮೊತ್ತ 5 ವಿಕೆಟ್ ನಷ್ಟಕ್ಕೆ 185 ಕ್ಕೆ ಬಂದು ನಿಂತಿತು.

186 ರನ್ ಗಳ ಗುರಿ ಪಡೆದ ಐರ್ಲೆಂಡ್ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. 28 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಈ ಹಂತದಲ್ಲಿ ಆಂಡ್ರ್ಯೂ ಬಾಲ್ಬಿರ್ನಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಬಾಲ್ಬಿರ್ನಿ 51 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 5 ಫೋರ್ ಗಳೊಂದಿಗೆ 72 ರನ್  ಭಾರಿಸಿದರು . ಉಳಿದ ಬ್ಯಾಟರ್ಗಳಿಂದ ನಿರೀಕ್ಷಿತ ಪ್ರದರ್ಶನ  ನೀಡಲಿಲ್ಲ . ಇನ್ನು ಕೊನೆಯ ಹಂತದಲ್ಲಿ ಮಾರ್ಕ್ ಅಡೈರ್ 23 ರನ್ ಗಳನ್ನು ಬಾರಿಸಿದರು. 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 152 ರನ್ ಗಳಿಸಲಷ್ಟೇ ಶಕ್ತರಾದರು.

ಈ ಮೂಲಕ 33 ರನ್ ಗಳಿಂದ. 33 ರನ್ ಗಳಿಂದ ಗೆದ್ದು ಮೂರು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ತನ್ನದಾಗಿಸಿಕೊಂಡಿದ್ದಾರೆ.

ಭಾರತದ ಪರ ಬುಮ್ರಾ 2ವಿಕೆಟ್. ಪ್ರಸಿದ್ಧ್ ಕೃಷ್ಣ ಮತ್ತು ರವಿ ಬಿಷ್ಣೋಯ್ ಎರಡು ವಿಕೆಟ್ ಪಡೆದರೆ, ಅರ್ಷದೀಪ್ ಸಿಂಗ್ ಒಂದು ವಿಕೆಟ್ ಪಡೆದರು.