ಮನೆ ಕ್ರೀಡೆ ಅಂಧರ ಟಿ20 ವಿಶ್ವಕಪ್ ಗೆದ್ದ ಭಾರತ

ಅಂಧರ ಟಿ20 ವಿಶ್ವಕಪ್ ಗೆದ್ದ ಭಾರತ

0

ಬೆಂಗಳೂರು(Bengaluru): ಅಂಧರ ಟಿ20 ವಿಶ್ವಕಪ್ ಟೂರ್ನಿಯ ಫೈನಲ್‌ನಲ್ಲಿ ಶನಿವಾರ ಬಾಂಗ್ಲಾದೇಶದ ವಿರುದ್ಧ ಭಾರತ ಗೆಲುವು ಸಾಧಿಸಿದೆ. ಈ ಮೂಲಕ ಮೂರನೇ ಬಾರಿ ಪ್ರಶಸ್ತಿ ಗೆದ್ದು ಸಂಭ್ರಮಿಸಿದೆ.

ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತು.

ಅದರಂತೆ ಭಾರತ 20 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 277 ರನ್‌ಗಳ ಬೃಹತ್‌ ಮೊತ್ತ ಪೇರಿಸಿತು. ಭಾರತರ ಪರ ಸುನಿಲ್ ರಮೇಶ್ ಔಟಾಗದೆ 136, ಅಜಯ್‌ ಕುಮಾರ್ ರೆಡ್ಡಿ ಔಟಾಗದೆ 100 ಶತಕ ಸಿಡಿಸಿ ಸಂಭ್ರಮಿಸಿದರು.

278 ರನ್‌’ಗಳ ಬೃಹತ್‌ ಮೊತ್ತ ಬೆನ್ನತ್ತಿದ್ದ ಬಾಂಗ್ಲಾ 20 ಓವರ್‌’ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 157 ರನ್ ಗಳಿಸಿ ಸೋಲು ಕಂಡಿತು.

ಇದರೊಂದಿಗೆ ಭಾರತ 120 ರನ್‌ಗಳ ಅಂತರದಿಂದ ಗೆಲುವಿನ ನಗೆ ಬೀರಿತು.ಈ ಹಿಂದೆ ನಡೆದ ಎರಡೂ ಆವೃತ್ತಿಗಳಲ್ಲಿ ಭಾರತ ತಂಡ ಪ್ರಶಸ್ತಿ ತನ್ನದಾಗಿಸಿಕೊಂಡಿತ್ತು. 2012ರ ಟೂರ್ನಿಯ ಫೈನಲ್‌ನಲ್ಲಿ ಪಾಕಿಸ್ತಾನ ತಂಡವನ್ನು 29 ರನ್‌ಗಳಿಂದ ಮಣಿಸಿತ್ತು.

2017ರಲ್ಲಿ ನಡೆದ ಎರಡನೇ ಆವೃತ್ತಿಯ ಪ್ರಶಸ್ತಿ ಸುತ್ತಿನ ಸೆಣಸಾಟದಲ್ಲಿ ಪಾಕಿಸ್ತಾನದ ವಿರುದ್ಧವೇ ಒಂಬತ್ತು ವಿಕೆಟ್‌’ ಗಳಿಂದ ಗೆಲುವು ಸಾಧಿಸಿತ್ತು. ಇವೆರಡೂ ಪಂದ್ಯಗಳು ಬೆಂಗಳೂರಿನಲ್ಲಿ ನಡೆದಿದ್ದವು.ಈ ಟೂರ್ನಿಯ ಸೆಮಿಫೈನಲ್‌’ನಲ್ಲಿ ಭಾರತ ತಂಡವು 207 ರನ್‌ಗಳಿಂದ ದಕ್ಷಿಣ ಆಫ್ರಿಕಾ ತಂಡಕ್ಕೆ ಸೋಲುಣಿಸಿತ್ತು.

ನಾಲ್ಕರ ಘಟ್ಟದ ಮತ್ತೊಂದು ಪಂದ್ಯದಲ್ಲಿ ಬಾಂಗ್ಲಾ ತಂಡವು 64 ರನ್‌ಗಳಿಂದ ಶ್ರೀಲಂಕಾ ತಂಡದ ಸವಾಲು ಮೀರಿತ್ತು.

ಹಿಂದಿನ ಲೇಖನನ್ಯಾಯಾಂಗಕ್ಕೆ ಯಾವುದೇ ಪ್ರಕರಣ ದೊಡ್ಡದೂ ಅಲ್ಲ ಚಿಕ್ಕದೂ ಅಲ್ಲ: ಕಾನೂನು ಸಚಿವರ ಹೇಳಿಕೆಗೆ ಸಿಜೆಐ ಪ್ರತಿಕ್ರಿಯೆ
ಮುಂದಿನ ಲೇಖನಮೀನು ವ್ಯಾಪಾರಿ ಹತ್ಯೆ ಮಾಡಿದ್ದ ಆರೋಪಿ ಮೈಸೂರಿನಲ್ಲಿ ಬಂಧನ