ಮನೆ ಸುದ್ದಿ ಜಾಲ 74ನೇ ಸೇನಾ ದಿನಾಚರಣೆ: ವೀರ ಯೋಧರನ್ನು ಸ್ಮರಿಸಿದ ನಾಯಕರು

74ನೇ ಸೇನಾ ದಿನಾಚರಣೆ: ವೀರ ಯೋಧರನ್ನು ಸ್ಮರಿಸಿದ ನಾಯಕರು

0

ನವದೆಹಲಿ: ಜನವರಿ 15 ರಂದು ಆಚರಿಸಲ್ಪಡುವ ಸೇನಾ ದಿನಾಚರಣೆ ಅಂಗವಾಗಿ  ದೇಶದ ರಕ್ಷಣೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಧೀರ ಯೋಧರನ್ನು ಪ್ರಮುಖ ನಾಯಕರನ್ನು ಸ್ಮರಿಸಿದ್ದಾರೆ. ಅಂತೆಯೇ ನಮ್ಮ ಹೆಮ್ಮೆಯ ಸೈನಿಕರಿಗೆ ಭಾರತೀಯ ಸೇನಾ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿ ಅವರ ತ್ಯಾಗ, ಬಲಿದಾನಗಳನ್ನು ಕೊಂಡಾಡಿದ್ದಾರೆ.

ಟ್ವಿಟ್ಟರ್ ನಲ್ಲಿ ಸೇನಾ ದಿನಾಚರಣೆಯ ಶುಭಾಶಯ ಕೋರಿರುವ ಪ್ರಧಾನಿ ನರೇಂದ್ರ ಮೋದಿಯವರು, ಭಾರತೀಯ ಸೇನೆಯು ತನ್ನ ಶೌರ್ಯ ಮತ್ತು ವೃತ್ತಿಪರತೆಗೆ ಹೆಸರುವಾಸಿಯಾಗಿದೆ. ಭಾರತೀಯ ಸೇನೆಯ ಸಿಬ್ಬಂದಿ ಪ್ರತಿಕೂಲ ಭೂಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಾರೆ ಮತ್ತು ನೈಸರ್ಗಿಕ ವಿಕೋಪಗಳು ಸೇರಿದಂತೆ ಮಾನವೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಸಹ ನಾಗರಿಕರಿಗೆ ಸಹಾಯ ಮಾಡುವಲ್ಲಿ ಮುಂಚೂಣಿಯಲ್ಲಿದ್ದಾರೆ. ಸಾಗರೋತ್ತರ ಶಾಂತಿಪಾಲನಾ ಕಾರ್ಯಾಚರಣೆಗಳಲ್ಲಿ ಸೇನೆಯ ಅದ್ಭುತ ಕೊಡುಗೆಯ ಬಗ್ಗೆ ಭಾರತವು ಹೆಮ್ಮೆಪಡುತ್ತದೆ. ರಾಷ್ಟ್ರದ ಸುರಕ್ಷತೆಗಾಗಿ ಭಾರತೀಯ ಸೇನೆಯ ಅಮೂಲ್ಯ ಕೊಡುಗೆಗಳನ್ನು ಪದಗಳಿಂದ ವ್ಯಕ್ತಪಡಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟ್ವೀಟ್ ಮಾಡಿ, ರಾಷ್ಟ್ರೀಯ ಭದ್ರತೆ ಒದಗಿಸುವಲ್ಲಿ ಭಾರತೀಯ ಸೇನೆ ಪ್ರಮುಖ ಪಾತ್ರ ವಹಿಸಿದೆ. ಗಡಿ ರಕ್ಷಣೆ ಮತ್ತು ಶಾಂತಿ ಕಾಪಾಡುವಲ್ಲಿ ನಮ್ಮ ಸೈನಿಕರು ವೃತ್ತಿಪರತೆ, ತ್ಯಾಗ ಮತ್ತು ಶೌರ್ಯವನ್ನು ಪ್ರದರ್ಶಿಸಿದ್ದಾರೆ. ನಿಮ್ಮ ಸೇವೆಗೆ ರಾಷ್ಟ್ರವು ಆಭಾರಿಯಾಗಿದೆ. ಯೋಧರಿಗೆ ಸೇನಾ ದಿನದ ಶುಭಾಶಯಗಳು’ ಎಂದು ತಿಳಿಸಿದ್ದಾರೆ

ಮೂರು ಪಡೆಗಳ ಮುಖ್ಯಸ್ಥರಿಂದ ವೀರ ಯೋಧರಿಗೆ ನಮನ
ಸೇನಾ ದಿನಾಚರಣೆ ಹಿನ್ನೆಲೆಯಲ್ಲಿ ಮೂರು ಪಡೆಗಳ ಮುಖ್ಯಸ್ಥರು ನವದೆಹಲಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕ ಸ್ಥಳಕ್ಕೆ ಭೇಟಿ ನೀಡಿ ಪುಷ್ಪ ಗೌರವ ಸಲ್ಲಿಸಿದರು. ಜನರಲ್​​ ಮನೋಜ್​​​​​​ ಮುಕುಂದ್​ ನರವಾಣೆ, ಏರ್​​ ಚೀಫ್​ ಮಾರ್ಷಲ್​​ ವಿಆರ್​ ಚೌಧರಿ ಹಾಗೂ ಅಡ್ಮಿರ್ಲ್​​ ಆರ್​ ಹರಿ ಕುಮಾರ್​ ಈ ಸಮಾರಂಭದಲ್ಲಿ ಪಾಲ್ಗೊಂಡರು.

ದೆಹಲಿಯ ಕಂಟೋನ್ಮೆಂಟ್​ನ ಕಾರ್ಯಪ್ಪ ಪರೇಡ್ ಗ್ರೌಂಡ್​ನಲ್ಲಿ ಮುಖ್ಯ ಪರೇಡ್ ನಡೆಯುತ್ತಿದ್ದು, ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ ನರವಣೆ ಸಲ್ಯೂಟ್ ಪಡೆದರು. ಪ್ರತಿವರ್ಷದಂತೆ ಈ ಬಾರಿಯೂ ಯೋಧರು ಕವಾಯತು ಪ್ರದರ್ಶಿಸುತ್ತಿದ್ದು, ಯುದ್ಧೋಪಕರಣಗಳ ಪ್ರದರ್ಶನವೂ ನಡೆಯುತ್ತಿದೆ.

ಈ ಬಾರಿ ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್​ಎಎಲ್) ನಿರ್ವಿುತ ಸ್ವದೇಶಿ ಹೊಸ ಲೈಟ್ ಕೊಂಬ್ಯಾಟ್ ಹೆಲಿಕಾಪ್ಟರ್, ಅಡ್ವಾನ್ಸ್ಡ್’ಲೈಟ್ ಹೆಲಿಕಾಪ್ಟರ್, ಡ್ರೋನ್​ಗಳ ಪ್ರದರ್ಶನ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ. 

ಸೇನಾ ದಿನಾಚರಣೆ ಕುರಿತ ಮಾಹಿತಿ: ಫೀಲ್ಡ್ ಮಾರ್ಷಲ್ ಕೊಡಾಂಡೇರಾ ಎಂ. ಕಾರಿಯಪ್ಪ ಅವರ (ಆಗಿನ ಲೆಫ್ಟಿನೆಂಟ್ ಜನರಲ್) ಭಾರತೀಯ ಸೇನೆಯ ಮೊದಲ ಕಮಾಂಡರ್-ಇನ್-ಚೀಫ್ ಆಗಿ ಅಧಿಕಾರ ವಹಿಸಿಕೊಂಡಿದ್ದನ್ನು ಗುರುತಿಸಿ ಭಾರತದಲ್ಲಿ ಪ್ರತಿವರ್ಷ ಜನವರಿ 15 ರಂದು ಸೇನಾ ದಿನವನ್ನು ಆಚರಿಸಲಾಗುತ್ತದೆ. ಕೆ. ಎಂ.ಕಾರ್ಯಪ್ಪ ಅವರು ಭಾರತೀಯ ಸೇನೆಯ ಮೊದಲ ಕಮಾಂಡರ್-ಇನ್-ಚೀಫ್ ಆಗಿ 15 ಜನವರಿ 1949 ರಂದು ಅಧಿಕಾರ ವಹಿಸಿಕೊಂಡರು.

ಇಂದು ಭಾರತ ತನ್ನ 74ನೇ ಭಾರತೀಯ ಸೇನಾ ದಿನವನ್ನು ಆಚರಿಸುತ್ತಿದೆ. ದೇಶ ಮತ್ತು ನಾಗರಿಕರನ್ನು ರಕ್ಷಿಸಲು ಪ್ರಾಣ ತ್ಯಾಗ ಮಾಡಿದ ಧೀರ ಸೈನಿಕರಿಗೆ ಗೌರವ ಸಲ್ಲಿಸಲು ಇಂದು ಪ್ರಮುಖ ದಿನವಾಗಿದೆ.

ಹಿಂದಿನ ಲೇಖನಕೊರೋನಾ: ಇಂದು 2.68 ಲಕ್ಷ ಹೊಸ ಕೇಸ್ ಪತ್ತೆ
ಮುಂದಿನ ಲೇಖನಮುಂದಿನ ಬ್ರಿಟನ್ ಪ್ರಧಾನಿಯಾಗಿ ಇನ್ಫೋಸಿಸ್ ನಾರಾಯಣ ಮೂರ್ತಿ ಅಳಿಯ ರಿಷಿ ?