ಮನೆ ಉದ್ಯೋಗ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್​ ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್​ ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

0

ಬೆಂಗಳೂರು: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಅನೇಕ ಸೋಷಿಯಲ್ ಮೀಡಿಯಾ ಕಂಟೆಂಟ್ ರೈಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಹಾಕಬಹುದು.

ವಿದ್ಯಾರ್ಹತೆ:

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪತ್ರಿಕೋದ್ಯಮ, ನ್ಯೂ ಮೀಡಿಯಾದಲ್ಲಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

ನಿಗದಿಪಡಿಸಿಲ್ಲ.

ಉದ್ಯೋಗದ ಸ್ಥಳ:

ಬೆಂಗಳೂರು

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ ಸಂದರ್ಶನ

ಅರ್ಜಿ ಹಾಕೋದು ಹೇಗೆ?

ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.