ಮನೆ ಉದ್ಯೋಗ ಇಂಡಿಯನ್​ ಓವರ್​ ಸೀಸ್​, ಯೂನಿಯನ್​ ಬ್ಯಾಂಕ್ ​ನಲ್ಲಿ ಅಪ್ರೆಂಟಿಸ್​ ಹುದ್ದೆ ನೇಮಕಾತಿ: ಪದವೀಧರರು ಅರ್ಜಿ ಸಲ್ಲಿಸಿ

ಇಂಡಿಯನ್​ ಓವರ್​ ಸೀಸ್​, ಯೂನಿಯನ್​ ಬ್ಯಾಂಕ್ ​ನಲ್ಲಿ ಅಪ್ರೆಂಟಿಸ್​ ಹುದ್ದೆ ನೇಮಕಾತಿ: ಪದವೀಧರರು ಅರ್ಜಿ ಸಲ್ಲಿಸಿ

0

ಬೆಂಗಳೂರು: ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್​ ಆಗಿ ಗುರುತಿಸಿಕೊಂಡಿರುವ ಇಂಡಿಯನ್​ ಓವರ್ ​​ಸೀಸ್​ ಬ್ಯಾಂಕ್​ನಲ್ಲಿ ಅಪ್ರೆಂಟಿಸ್​ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.

Join Our Whatsapp Group

 ಒಂದು ವರ್ಷದ ಅವಧಿಗೆ ಈ ಹುದ್ದೆ ನೇಮಕಾತಿ ಮಾಡಲಾಗುವುದು. ಈ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಗೌರವಧನದ ಮಾಸಿಕ ವೇತನವನ್ನು ನೀಡಲಾಗುತ್ತದೆ.

ಹುದ್ದೆ ವಿವರ: ಒಟ್ಟು 550 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ವಿವಿಧ ರಾಜ್ಯಗಳಲ್ಲಿ ಹುದ್ದೆ ಹಂಚಿಕೆಯಾಗಿದ್ದು, ಅದರಲ್ಲಿ 50 ಹುದ್ದೆಗಳನ್ನು ಕರ್ನಾಟಕಕ್ಕೆ ಮೀಸಲಿರಿಸಲಾಗಿದೆ.

ವಿದ್ಯಾರ್ಹತೆ: ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ: ಅಭ್ಯರ್ಥಿ ಕನಿಷ್ಠ ವಯಸ್ಸು 20, ಗರಿಷ್ಠ ವಯೋಮಿತಿ 28ವರ್ಷವಾಗಿದೆ. ಪ. ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಸಾಮಾನ್ಯ, ಒಬಿಸಿ ಮತ್ತು ಆರ್ಥಿಕ ಹಿಂದುಳಿದ ಅಭ್ಯರ್ಥಿಗಳಿಗೆ 944 ರೂ, ಪ.ಜಾ. ಪ. ಪಂ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 708 ರೂ. ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ 472 ರೂ. ಅರ್ಜಿ ಶುಲ್ಕ ನಿಗದಿಸಲಾಗಿದೆ.

ಅಭ್ಯರ್ಥಿಗಳನ್ನು ಈ ಹುದ್ದೆಗೆ ಆನ್​ಲೈನ್​ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗೆ ಆಗಸ್ಟ್​ 28ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 15 ಆಗಿದೆ. ಸೆಪ್ಟೆಂಬರ್​ 22ರಂದು ಆನ್​ಲೈನ್​ ಪರೀಕ್ಷೆ ನಡೆಯಲಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು iob.in ಭೇಟಿ ನೀಡಬಹುದು.

ಯೂನಿಯನ್​ ಬ್ಯಾಂಕ್​ನಲ್ಲಿ ನೇಮಕಾತಿ: ಯೂನಿಯನ್​ ಬ್ಯಾಂಕ್​ನಲ್ಲೂ ಒಂದು ವರ್ಷದ ಅವಧಿಗೆ ಅಪ್ರೆಂಟಿಸ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 500 ಹುದ್ದೆಗಳ ನೇಮಕಾತಿ ನಡೆಯಲಿದ್ದು, ಕರ್ನಾಟಕದಲ್ಲಿ 40 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.

ವಿದ್ಯಾರ್ಹತೆ: ಅಭ್ಯರ್ತಿಗಳು ಯಾವುದೇ ವಿಷಯದಲ್ಲಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರ್ಣಗೊಳಿಸಿರುಬೇಕು.

ವಯೋಮಿತಿ: ಅಭ್ಯರ್ಥಿ ಕನಿಷ್ಠ ವಯಸ್ಸು 20, ಗರಿಷ್ಠ ವಯೋಮಿತಿ 28ವರ್ಷವಾಗಿದೆ. ಪ. ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 15 ಸಾವಿರ ಗೌರವ ಧನ ನೀಡಲಾಗುವುದು.

ಈ ಹುದ್ದೆಗೆ ಆಗಸ್ಟ್​ 28ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೇಯ ದಿನಾಂಕ ಸೆಪ್ಟೆಂಬರ್​ 17 ಆಗಿದೆ. ಅಭ್ಯರ್ಥಿಗಳು ಆನ್​ಲೈನ್​ ಅರ್ಜಿ ಸಲ್ಲಿಕೆಗೆ ಮುನ್ನ ಸರ್ಕಾರದ apprenticeshipindia.gov.in ಅಥವಾ nats.education.gov.in ಇಲ್ಲಿ ನೋಂದಣಿ ಮಾಡಬೇಕಿದೆ.

ಈ ಕುರಿತ ಹೆಚ್ಚಿನ ಮಾಹಿತಿಗೆ unionbankofindia.co.in ಇಲ್ಲಿಗೆ ಭೇಟಿ ನೀಡಿ