ಮನೆ ಉದ್ಯೋಗ ಭಾರತೀಯ ಮಸಾಲೆ ಮಂಡಳಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಭಾರತೀಯ ಮಸಾಲೆ ಮಂಡಳಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಭಾರತೀಯ ಮಸಾಲೆ ಮಂಡಳಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಒಟ್ಟು 7 ಸ್ಪೈಸಸ್ ಎಕ್ಸ್‌ ಟೆನ್ಶನ್ ಟ್ರೈನೀಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಹಾಕಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಕಲೇಶಪುರದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಕ್ಟೋಬರ್ 11, 2023 ಅಂದರೆ ನಾಳೆ ಬೆಳಗ್ಗೆ 10.30ಕ್ಕೆ

ವಿದ್ಯಾರ್ಹತೆ:

ಭಾರತೀಯ ಮಸಾಲೆ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿ.ಎಸ್ಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಭಾರತೀಯ ಮಸಾಲೆ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಅಕ್ಟೋಬರ್ 1, 2023ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

ಭಾರತೀಯ ಮಸಾಲೆ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 20,000 ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:

ಭಾರತೀಯ ಮಸಾಲೆ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹಾಸನದ ಸಕಲೇಶಪುರದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸಂದರ್ಶನ

ಸಂದರ್ಶನ ನಡೆಯುವ ಸ್ಥಳ:

ಮಸಾಲೆ ಮಂಡಳಿ

ಪ್ರಾದೇಶಿಕ ಕಚೇರಿ

ಲಕ್ಷ್ಮೀಪುರಂ ಬಡಾವಣೆ

ಸಕಲೇಶಪುರ-573134

ಪ್ರಮುಖ ದಿನಾಂಕಗಳು:

ನೋಟಿಫಿಕೇಶನ್ ಬಿಡುಗಡೆಯಾದ ದಿನಾಂಕ: 03/10/2023

ಸಂದರ್ಶನ ನಡೆಯುವ ದಿನ: ಅಕ್ಟೋಬರ್ 11, 2023 ನಾಳೆ ಬೆಳಗ್ಗೆ 10.30ಕ್ಕೆ

ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 08173 295008 ಗೆ ಕರೆ ಮಾಡಿ.

ಹಿಂದಿನ ಲೇಖನಎರಡು ಭಾಗದಲ್ಲಿ ರಿಲೀಸ್ ಆಗಲಿದೆ ವೈಎಸ್​ ಜಗನ್​ ಮೋಹನ್ ರೆಡ್ಡಿ ಬಯೋಪಿಕ್
ಮುಂದಿನ ಲೇಖನತೆರಿಗೆ ವಂಚನೆ: ಬೆಂಗಳೂರಿನಲ್ಲಿ ಮತ್ತೆ ಐಟಿ ದಾಳಿ