ಮನೆ ರಾಜಕೀಯ ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ: ಎಂ ಬಿ ಪಾಟೀಲ್

ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ: ಎಂ ಬಿ ಪಾಟೀಲ್

0

ಬೆಂಗಳೂರು: ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಭಾನುವಾರ ಆರೋಪಿಸಿದ್ದಾರೆ. ರಾಜ್ಯಕ್ಕೆ ಬೇರೆ ಯಾವುದೇ ಆಯ್ಕೆಯಿಲ್ಲದ ಕಾರಣ ಕೇಂದ್ರದ ನಿಧಿಯಲ್ಲಿ ತನ್ನ ಪಾಲು ಕೋರಿ ಪಿಐಎಲ್‌ನೊಂದಿಗೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರುವುದಾಗಿ ತಿಳಿಸಿದ್ದಾರೆ.

Join Our Whatsapp Group

ರಾಜ್ಯವು 2.5 ಲಕ್ಷ ಕೋಟಿಯಷ್ಟು ಗಮನಾರ್ಹ ವಾರ್ಷಿಕ ಸೆಸ್ ಸಂಗ್ರಹಿಸುತ್ತಿದ್ದರೂ, ಕರ್ನಾಟಕದಂತಹ ಪ್ರಗತಿಪರ ರಾಜ್ಯಗಳಿಗೆ ಹಣ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಪಾಟೀಲ್ ತಮ್ಮ ಎಕ್ಸ್ ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ.

‘ಕರ್ನಾಟಕ, ತಮಿಳುನಾಡು ಮತ್ತು ತೆಲಂಗಾಣದಂತಹ ರಾಜ್ಯಗಳು ಸೆಸ್ ಸಂಗ್ರಹಕ್ಕೆ ಹೆಚ್ಚಿನ ಪಾಲನ್ನು ನೀಡುತ್ತಿದ್ದರೂ, ಅವುಗಳಿಗೆ ಕೇಂದ್ರದಿಂದ ನ್ಯಾಯಯುತವಾದ ಅನುದಾನ ಹಂಚಿಕೆಯಾಗುತ್ತಿಲ್ಲ. ಬದಲಾಗಿ, ಉತ್ತರ ಪ್ರದೇಶ ಮತ್ತು ಬಿಹಾರದಂತಹ ರಾಜ್ಯಗಳಿಗೆ ಹೆಚ್ಚಿನ ಪಾಲನ್ನು ಹಂಚಿಕೆ ಮಾಡಲಾಗುತ್ತಿದೆ. ಇದನ್ನು ‘ಪ್ರಶ್ನಾತೀತ ಅನ್ಯಾಯ’ ಎಂದು ವಿವರಿಸಿದ ಅವರು ತಮ್ಮ ಪೋಸ್ಟ್‌ನಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ಟ್ಯಾಗ್ ಮಾಡಿದ್ದಾರೆ.

ಹಿಂದಿನ ಲೇಖನರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು: ಕಿಚ್ಚ ಸುದೀಪ್
ಮುಂದಿನ ಲೇಖನಪಬ್​, ಬಾರ್ ​ಗಳಲ್ಲಿ ಮದ್ಯ ಸೇವಿಸಲು ಸರ್ಕಾರಿ ಗುರುತಿನ ಚೀಟಿ ಕಡ್ಡಾಯ: ಮಹಾರಾಷ್ಟ್ರ ಸರ್ಕಾರ ಆದೇಶ