ಮನೆ ಅಪರಾಧ ಅಕ್ರಮವಾಗಿ ರಕ್ತಚಂದನ ಸಾಗಾಟ ಮಾಡುತ್ತಿದ್ದ ಇನ್ನೋವಾ ಕಾರು ಪಲ್ಟಿ: ಮೂವರಿಗೆ ಗಾಯ

ಅಕ್ರಮವಾಗಿ ರಕ್ತಚಂದನ ಸಾಗಾಟ ಮಾಡುತ್ತಿದ್ದ ಇನ್ನೋವಾ ಕಾರು ಪಲ್ಟಿ: ಮೂವರಿಗೆ ಗಾಯ

0

ಚಿಕ್ಕಬಳ್ಳಾಪುರ: ಆಂದ್ರದ ಕಡಪದಿಂದ ಬೆಂಗಳೂರಿಗೆ ರಕ್ತ ಚಂದನ ಸಾಗಾಟ ಮಾಡುತ್ತಿದ್ದ ಇನ್ನೋವಾ ಕಾರು ಬೆಂಗಳೂರು ಹೈದರಾಬಾದ್ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿ ಹೊಡೆದಿದ್ದು, ಮೂವರು ಗಾಯಗೊಂಡಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಬಳಿ ಇಂದು ಬೆಳಗ್ಗೆ 7 ಗಂಟೆ ಸಮಯಕ್ಕೆ ಈ ಘಟನೆ ನಡೆದಿದೆ.

ಬೆಂಗಳೂರಿನ ಬಾಷಾ ಎಂಬುವರಿಗೆ ಮಾರಾಟ ಮಾಡಲು ಅಕ್ರಮವಾಗಿ ರಕ್ತಚಂದನ ತುಂಡುಗಳನ್ನು ಇನ್ನೋವಾ ಕಾರಿನಲ್ಲಿ ಇರಿಸಿಕೊಂಡು ಸಾಗಾಟ ಮಾಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ‌ಜಖಂ ಆಗಿದೆ. ಕಾರಿನಲ್ಲಿದ್ದ ಚಾಲಕ ಸೇರಿ ಮೂವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ಕೂಡಲೇ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.

ಸ್ಥಳಕ್ಕೆ ಪೆರೇಸಂದ್ರ ಠಾಣೆಯ ಪಿಎಸ್ ಐ ಜಗದೀಶರೆಡ್ಡಿ ಹಾಗೂ ಸಿಬ್ಬಂದಿ ಭೇಟಿ‌ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಹಿಂದಿನ ಲೇಖನದಸರಾ ಉದ್ಘಾಟನೆ ನನಗೆ ಸಿಕ್ಕಿರುವುದು ಸಾಮಾಜಿಕ ಕಲಾ ನ್ಯಾಯ: ಹಂಸಲೇಖ
ಮುಂದಿನ ಲೇಖನಸ್ತ್ರೀವಾದಿ ಬೇರುಗಳನ್ನು ಮರೆತ ಪ. ಬಂಗಾಳ, ಪ್ರಗತಿ ಮತ್ತು ಆಡಳಿತದಲ್ಲಿ ಹಿಂದುಳಿದಿದೆ: ಕಲ್ಕತ್ತಾ ಹೈಕೋರ್ಟ್ ಅಸಮಾಧಾನ