ಮನೆ ರಾಜಕೀಯ ಇಡಿಯಿಂದ ಮಲ್ಲಿಕಾರ್ಜುನ ಖರ್ಗೆ ವಿಚಾರಣೆ

ಇಡಿಯಿಂದ ಮಲ್ಲಿಕಾರ್ಜುನ ಖರ್ಗೆ ವಿಚಾರಣೆ

0

ನವದೆಹಲಿ(New Delhi): ನ್ಯಾಷನಲ್ ಹೆರಾಲ್ಡ್ ಕೇಸ್(National herald) ನಲ್ಲಿ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಅವರನ್ನು  ಜಾರಿ ನಿರ್ದೇಶನಾಲಯ (ಇಡಿ)(ED) ಸೋಮವಾರ ವಿಚಾರಣೆಗೆ ಒಳಪಡಿಸಿದೆ.

ತನಿಖೆಗಾಗಿ ನವದೆಹಲಿಯಲ್ಲಿರುವ ಜಾರಿ ನಿರ್ದೇಶಾಲಯ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವಂತೆ ರಾಜ್ಯಸಭೆಯ ವಿಪಕ್ಷ ನಾಯಕರಾಗಿರುವ ಮಲ್ಲಿಕಾರ್ಜನ ಖರ್ಗೆ ಅವರಿಗೆ ಸಮನ್ಸ್ ನೀಡಲಾಗಿತ್ತು ಎಂದು ಅವರು ಹೇಳಿದ್ದಾರೆ. 

ತನಿಖೆಯಲ್ಲಿ ಕೆಲವೊಂದು ವಿಷಯಗಳನ್ನು ತಿಳಿಯಲು ಇಡಿ ಬಯಸಿದ್ದು, ಹಣ ವರ್ಗಾವಣೆ ತಡೆ ಕಾಯ್ಡೆಯಡಿ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗುತ್ತದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಹಿಂದಿನ ಲೇಖನಮುರುಘಾ ಶರಣರ ಜನ್ಮದಿನವನ್ನು ಸಮಾನತಾ ದಿನವೆಂದು ಆಚರಣೆ: ಸಿಎಂ ಬೊಮ್ಮಾಯಿ
ಮುಂದಿನ ಲೇಖನಸಿಎಂ ಬೊಮ್ಮಾಯಿ ರಾಜ್ಯವನ್ನು ಗೂಂಡಾಗಳ ಕೈಗೆ ನೀಡಿದ್ದಾರೆ: ಯು.ಟಿ. ಖಾದರ್ ಆರೋಪ