ಮನೆ ಸ್ಥಳೀಯ ಕರ್ನಾಟಕ ರಾಜ್ಯ ಆಹಾರ ಆಯೋಗದಿಂದ ನಂಜನಗೂಡು ತಾಲೂಕಿನ ವಿವಿಧ ಭಾಗಗಳಿಗೆ ಭೇಟಿ ಪರಿಶೀಲನೆ

ಕರ್ನಾಟಕ ರಾಜ್ಯ ಆಹಾರ ಆಯೋಗದಿಂದ ನಂಜನಗೂಡು ತಾಲೂಕಿನ ವಿವಿಧ ಭಾಗಗಳಿಗೆ ಭೇಟಿ ಪರಿಶೀಲನೆ

0

ಮೈಸೂರು: ನಂಜನಗೂಡಿನ ತಾಲ್ಲೂಕಿನ ವಿವಿಧ ಸರ್ಕಾರಿ ಕಚೇರಿಗಳಿಗೆ ಇಂದು ಭೇಟಿ ನೀಡಿದ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರು ಮೊದಲು ನಂಜನಗೂಡು ಸರ್ಕಾರಿ ಆಸ್ಪತ್ರೆ , ತಾಯಿ ಮಕ್ಕಳ ಆಸ್ಪತ್ರೆ ಗೆ ಭೇಟಿ ನೀಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Join Our Whatsapp Group

ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿನ ನ್ಯೂನ್ಯತೆಗಳನ್ನು ಸರಿಪಡಿಸುವಂತೆ ಆಸ್ಪತ್ರೆಯ ವೈದ್ಯಾಧಿಕಾರಿಗೆ ಅಧ್ಯಕ್ಷ ಡಾ. ಕೃಷ್ಣ ಮತ್ತು ಆಯೋಗದ ಸದಸ್ಯರಾದ ಮಾರುತಿ ದೊಡ್ಡಲಿಂಗಣ್ಣವರ , ಲಿಂಗರಾಜಕೋಟೆ, ಸುಮಂತ ರಾವ್, ರೋಹಿಣಿ ಪ್ರಿಯ ಹಾಗೂ ವಿಜಯಲಕ್ಷ್ಮಿ ಸೂಚಿಸಿದರು.

ಈ ಆಸ್ಪತ್ರೆಯು 100 ಹಾಸಿಗೆವುಳ್ಳ ಆಸ್ಪತ್ರೆಯಾಗಿದ್ದು , ರೋಗಿಗಳ ಸಂಖ್ಯೆ ಹೆಚ್ಚಿನ ಸಂಖ್ಯೆಯಲ್ಲಿ ಬರುವರು. ಈ ನಿಟ್ಟಿನಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲು ಗರ್ಭಿಣಿ ಮತ್ತು ಸ್ತ್ರೀ ರೋಗ ತಜ್ಞೆ ವೈದ್ಯರು ಇಲ್ಲದಿರುವುದನ್ನು ಆಯೋಗ ಗಂಭೀರವಾಗಿ ಪರಿಗಣಿಸಿ ಸೂಕ್ತ ವ್ಯವಸ್ಥೆಯನ್ನು ಆದಷ್ಟು ಬೇಗ ಮಾಡುವಂತೆ ಸೂಚಿಸಿದರು.

ಆಸ್ಪತ್ರೆಯಲ್ಲಿ ಸಮರ್ಪಕವಾಗಿ ಸ್ಕ್ಯಾನ್ ಮಾಡಲು ಹಾಗೂ ಆಸ್ಪತ್ರೆಯಲ್ಲಿ ಶುಚಿತ್ವದ ಕುರಿತು ಗಮನಹರಿಸುವಂತೆ ಸೂಚಿಸಿದರು.

ತದಾ ನಂತರ ನಂಜನಗೂಡು ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಒದಗಿಸುತ್ತಿರುವ ಬೀಜ, ಗೊಬ್ಬರ ಸೌಲಭ್ಯಗಳ ಕುರಿತು ಪರಿಶೀಲಿಸಿ ಸರ್ಕಾರದ ಸೌಲಭ್ಯಗಳನ್ನು ತ್ವರಿತವಾಗಿ ಸಮಯಕ್ಕೆ ಸರಿಯಾಗಿ ತಲುಪಿಸಲು ತಿಳಿಸಿದ ಅವರು ನಂತರ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ದಲ್ಲಿ ಅಳತೆ ಮಾಪನ ಇಲಾಖೆಯೊಂದಿಗೆ ಅವಶ್ಯಕ ಅಳತೆ ಕುರಿತು ಪರಿಶೀಲನೆ ನಡೆಸಿ ಸಾರ್ವಜನಿಕರಿಗೆ ನಿಯಮಾನುಸಾರ ವಿತರಿಸುವ ಕುರಿತು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಹಳ್ಳದಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಲ್ಲಿನ ಸಮರ್ಪಕ ವ್ಯವಸ್ಥೆಯ ಕುರಿತು ಪ್ರಶಂಸೆ ವ್ಯಕ್ತಪಡಿಸಿದರು.

ದೇವರಾಜ್ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿ ವಿದ್ಯಾರ್ಥಿಗಳಿಗೆ ಅಹವಾಲು ಸ್ವೀಕರಿಸಿ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆ ಆಗದಂತೆ ಅಗತ್ಯ ಕ್ರಮ ವಹಿಸುವಂತೆ ತಿಳಿಸಿದರು.

ನಂಜನಗೂಡು ತಾಲೂಕಿನ ಆಹಾರ ಇಲಾಖೆಯ ಸಗಟು ಆಹಾರ ದಾಸ್ತಾನು ಹಾಗೂ ಗೋಡೌನ್ ಪರಿಶೀಲಿಸಿ ಅಲ್ಲಿನ ಮೇಲ್ವಿಚಾರಕರಿಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ದಾಸ್ತಾನು ಮಳೆಗೆ ನಿಯಮಗಳ ಪ್ರಕಾರ ಸೂಕ್ತ ನಿಯಮವನ್ನು ಪಾಲಿಸಬೇಕೆಂದು ಸೂಚಿಸಿದರು.

ನಂಜನಗೂಡು ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ ವೃದ್ಧಾಪ್ಯ ವೇತನ, ಅಂಗವಿಕಲ ವೇತನ ,ವಿಧವಾ ವೇತನಗಳಿಗೆ ಸಂಬಂಧಿಸಿದ ಸಾರ್ವಜನಿಕರ ಅಹವಾಲಗಳನ್ನು ಪರಿಶೀಲಿಸಿ ತಹಶೀಲ್ದಾರ್ ಅವರಿಗೆ ತಕ್ಷಣ ಸಮಸ್ಯೆಗಳನ್ನು ಬಗೆಹರಿಸುವಂತೆ ಸೂಚಿಸಿದರು.

ಹಿಂದಿನ ಲೇಖನಕಿದ್ವಾಯಿ-ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ವೈದ್ಯರು-ಸಿಬ್ಬಂದಿಗಳಿಗೆ ಚಳಿ ಬಿಡಿಸಿದ ಸಚಿವ ಶರಣಪ್ರಕಾಶ್ ಪಾಟೀಲ್
ಮುಂದಿನ ಲೇಖನಶೃಂಗಾರ ರೂಪನು ಷಣ್ಮುಖನು