ಸಣ್ಣಪ್ರಮಾಣದ ಮಾದಕವಸ್ತು ದಂಧೆಕೋರರನ್ನು ಹಿಡಿಯವ ಬದಲು ಅಂತಾರಾಷ್ಟ್ರೀಯ ಮಾದಕದ್ರವ್ಯ ಜಾಲಗಳ ಬೆನ್ನತ್ತಲು ಕಾನೂನು ಜಾರಿ ಸಂಸ್ಥೆಗಳು ತಮ್ಮ ಸಮಯ ಮತ್ತು ಶಕ್ತಿಯನ್ನು ವ್ಯಯಿಸಬೇಕು ಎಂದು ತನಿಖಾ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಕಿವಿಮಾತು ಹೇಳಿದೆ.
[ಸಬೀರ್ ಮತ್ತು ಮಧ್ಯಪ್ರದೇಶ ಸರ್ಕಾರ ನಡುವಣ ಪ್ರಕರಣ].
ಅಂತಾರಾಷ್ಟ್ರೀಯ ಜಾಲಗಳನ್ನು ನಡೆಸುತ್ತಿರುವ ನಿಜವಾದ ಅಪರಾಧಿಗಳ ಬಗ್ಗೆ ಸರ್ಕಾರ ಏನು ಮಾಡುತ್ತಿದೆ? ಅದು ಸಣ್ಣ ವ್ಯಾಪಾರಿಗಳು (ಅಮಲು ಪದಾರ್ಥಗಳನ್ನು ಬೆಳೆಯುವ) ರೈತರನ್ನು ಹಿಡಿಯುತ್ತಿದೆಯೇ ವಿನಾ ನಿಜವಾದ ಅಪರಾಧಿಗಳನ್ನಲ್ಲ ಎಂದು ಸಿಜೆಐ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠ ಅಸಮಾಧಾನ ಹೊರಹಾಕಿತು.
ಅಫೀಮು ದೊರೆತ ಹಿನ್ನೆಲೆಯಲ್ಲಿ ಮಾದಕವಸ್ತು ಮತ್ತು ಅಮಲು ಪದಾರ್ಥ ಕಾಯಿದೆಯಡಿ ಆರೋಪ ಎದುರಿಸುತ್ತಿದ್ದ ದಂಧೆಕೋರನೊಬ್ಬ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿತು.
ಅಫೀಮು ಕಾರು ಅಥವಾ ಟ್ರಕ್’ನಲ್ಲಿ ಕಂಡುಬಂದಿಲ್ಲ. ಬದಲಿಗೆ ಆತನ ಕೃಷಿಭೂಮಿಯಲ್ಲಿ ಕಂಡುಬಂದಿದೆ. ಈಗಾಗಲೇ ಆತನಿಗೆ ಎರಡು ಬಾರಿ ಶಿಕ್ಷೆಯಾಗಿದೆ. ಹೀಗಾಗಿ ಜಾಮೀನು ಮನವಿ ತಿರಸ್ಕರಿಸುವಂತೆ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್’ಜಿ) ವಿಕ್ರಮಜಿತ್ ಬ್ಯಾನರ್ಜಿ ಅವರು ಕೋರಿದರು.
ಆದರೆ ಇದನ್ನು ಒಪ್ಪದ ನ್ಯಾಯಾಲಯ ಗರಿಷ್ಠ ಹತ್ತು ವರ್ಷ ಶಿಕ್ಷೆ ವಿಧಿಸಬಹುದಾದ ಪ್ರಕರಣದಲ್ಲಿ ಈಗಾಗಲೇ ಆರೋಪಿ ಐದು ವರ್ಷಗಳನ್ನು ಜೈಲಿನಲ್ಲಿ ಕಳೆದಿದ್ದಾನೆ. ಹೀಗಾಗಿ ಆತ ಜಾಮೀನು ಪಡೆಯಲು ಅರ್ಹ ಎಂದಿತು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.