ಮೈಸೂರು: ಬನ್ನೂರು ಪುರಸಭೆಯಿಂದ 2025-26 ನೇ ಸಾಲಿನ ಎಸ್.ಎಫ್.ಸಿ ಮುಕ್ತ ನಿಧಿ ಹಾಗೂ ಪುರಸಭಾ ನಿಧಿ ಅನುದಾನದಡಿ ಶೇ.24.10, ಶೇ.7.25 ಮತ್ತು ಶೇ.5ರ ಯೋಜನೆಯ ಅನುದಾನದಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಶೇ.24.10ರ ಯೋಜನೆಯಡಿ ಪರಿಶಿಷ್ಟ ಜಾತಿಯ/ಪರಿಶಿಷ್ಟ ಪಂಗಡದ/ ಶೇ.7.25 ಯೋಜನೆಯಡಿ ಇತರೆ ಹಿಂದುಳಿದ ವರ್ಗಗಳ ವೈಯಕ್ತಿಕ ಕಾರ್ಯಕ್ರಮದಡಿಯಲ್ಲಿ ಬಿ.ಇ. ಎಂ.ಬಿ.ಬಿ.ಎಸ್. ವ್ಯಾಸಾಂಗ ಮಾಡುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಖರೀದಿಗಾಗಿ ಸಹಾಯಧನ ನೀಡುವುದು. ಪೌರಕಾರ್ಮಿಕರ ಕಲ್ಯಾಣ ಕಾರ್ಯಕ್ರಮದಡಿ ವಿವಿಧ ಹಂತಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪೌರ ಕಾರ್ಮಿಕರ ಮಕ್ಕಳಿಗೆ ಎಸ್.ಎಸ್.ಎಲ್.ಸಿ/ ಪಿ.ಯು.ಸಿ/ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶಾಲಾ/ಕಾಲೇಜು ಶುಲ್ಕ ಪಾವತಿಸುವ ಬಾಬು ಮತ್ತು ಪ್ರೋತ್ಸಾಹ ಧನ ನೀಡುವುದು ಮತ್ತು ಶೇ.5ರ ಕಾರ್ಯಕ್ರಮದಡಿ ವಿಕಲಚೇತನರಿಗೆ ತ್ರಿಚಕ್ರ ವಾಹನ ಖರೀದಿಗೆ ಸಹಾಯಧನ ನೀಡುವುದು.
ಭರ್ತಿ ಮಾಡಿದ ಅರ್ಜಿಗಳನ್ನು ಪ್ರಕಟಣೆಗೊಂಡ ದಿನಾಂಕದಿoದ ಜುಲೈ 31 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಛೇರಿ ವೇಳೆಯಲ್ಲಿ ಪುರಸಭೆಯ ಬಡತನ ನಿರ್ಮೂಲನಾ ಕೋಶದ ಅಧಿಕಾರಿಗಳನ್ನು ಕಛೇರಿ ವೇಳೆ ಭೇಟಿ ನೀಡಿ ಅಗತ್ಯ ಮಾಹಿತಿ ಪಡೆಯಬಹುದು ಎಂದು ಬನ್ನೂರು ಪುರಸಭಾ ಮುಖ್ಯಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














