ಮಂಡ್ಯ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ 2025-26ನೇ ಸಾಲಿಗೆ ತಾಲ್ಲೂಕು ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಪ್ರವೇಶಾವಕಾಶವನ್ನು HMIS Portal ಮೂಲಕ ನೀಡಲಾಗುತ್ತಿದ್ದು, ಆಸಕ್ತ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ತಾಲ್ಲೂಕು ವ್ಯಾಪ್ತಿಯ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಆರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿಯನ್ನು www.swd.kar.nic.in ವೆಬ್‌ಸೈಟ್‌ನಲ್ಲಿ ಸಲ್ಲಿಸಬಹುದಾಗಿದೆ.
ಹಾಗೆಯೇ 2025-26ನೇ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಹಾಗೂ ಎಸ್.ಎಸ್.ಎಲ್.ಸಿ ಮತ್ತು ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳಲ್ಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರೋತ್ಸಾಹಧನ ಸೌಲಭ್ಯಕ್ಕಾಗಿ ಆರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಲಾಗಿದ್ದು, ಸಮಾಜ ಕಲ್ಯಾಣ ಇಲಾಖೆಯ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶ್ರೀರಂಗಪಟ್ಟಣ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ಕಛೇರಿಯ ಸಹಾಯಕ ನಿರ್ದೇಶಕರುನ್ನು ಸಂಪರ್ಕಿಸಬಹುದಾಗಿದೆ ಎಂದು ಶ್ರೀರಂಗಪಟ್ಟಣ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















