PL 2023: ಐಪಿಎಲ್ 62ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಆರಂಭಿಕ ಆಟಗಾರ ಶುಭ್ಮನ್ ಗಿಲ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ.
ವಿಶೇಷ ಎಂದರೆ ಈ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಗಿಲ್, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶೇಷ ದಾಖಲೆ ಮುರಿದಿದ್ದಾರೆ.
ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಗಿಲ್ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ವಿಶೇಷ ಎಂದರೆ ಕಡಿಮೆ ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದರೂ ಗಿಲ್ ಈ ವೇಳೆ ಒಂದೇ ಒಂದು ಸಿಕ್ಸ್ ಬಾರಿಸಿರಲಿಲ್ಲ. ಇದುವೇ ಹೊಸ ದಾಖಲೆಯಾಗಿದೆ.
ಇದೀಗ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಒಂದೇ ಒಂದು ಸಿಕ್ಸ್ ಸಿಡಿಸದೇ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ. ಇದರೊಂದಿಗೆ ಕಳೆದ 1 ದಶಕಗಳಿಂದ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶೇಷ ದಾಖಲೆ ಗಿಲ್ ಪಾಲಾಗಿದೆ.
ಇನ್ನು ಈ ಪಂದ್ಯದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಗಿಲ್ 56 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಅಲ್ಲದೆ ಅಂತಿಮವಾಗಿ 58 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 13 ಫೋರ್ ನೊಂದಿಗೆ 101 ರನ್ ಬಾರಿಸಿ ಮಿಂಚಿದ್ದರು.
ಇದರೊಂದಿಗೆ ಗುಜರಾತ್ ಟೈಟಾನ್ಸ್ ಪರ ಶತಕ ಬಾರಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಶುಭ್ಮನ್ ಗಿಲ್ ಪಾತ್ರರಾದರು.