ಮನೆ ಕ್ರೀಡೆ IPL 2023:  ಅತಿವೇಗವಾಗಿ ಅರ್ಧಶತಕ ಬಾರಿ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ಶುಭ್ಮನ್ ಗಿಲ್

IPL 2023:  ಅತಿವೇಗವಾಗಿ ಅರ್ಧಶತಕ ಬಾರಿ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ಶುಭ್ಮನ್ ಗಿಲ್

0

PL 2023: ಐಪಿಎಲ್ 62ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಆರಂಭಿಕ ಆಟಗಾರ ಶುಭ್ಮನ್ ಗಿಲ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ.

Join Our Whatsapp Group

ವಿಶೇಷ ಎಂದರೆ ಈ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಗಿಲ್, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶೇಷ ದಾಖಲೆ  ಮುರಿದಿದ್ದಾರೆ.

ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಗಿಲ್ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ವಿಶೇಷ ಎಂದರೆ ಕಡಿಮೆ ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದರೂ ಗಿಲ್ ಈ ವೇಳೆ ಒಂದೇ ಒಂದು ಸಿಕ್ಸ್ ಬಾರಿಸಿರಲಿಲ್ಲ. ಇದುವೇ  ಹೊಸ ದಾಖಲೆಯಾಗಿದೆ.

ಇದೀಗ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಒಂದೇ ಒಂದು ಸಿಕ್ಸ್ ಸಿಡಿಸದೇ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ. ಇದರೊಂದಿಗೆ ಕಳೆದ 1 ದಶಕಗಳಿಂದ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶೇಷ ದಾಖಲೆ ಗಿಲ್ ಪಾಲಾಗಿದೆ.

ಇನ್ನು ಈ ಪಂದ್ಯದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಗಿಲ್ 56 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಅಲ್ಲದೆ ಅಂತಿಮವಾಗಿ 58 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 13 ಫೋರ್ ನೊಂದಿಗೆ 101 ರನ್ ಬಾರಿಸಿ ಮಿಂಚಿದ್ದರು.

ಇದರೊಂದಿಗೆ ಗುಜರಾತ್ ಟೈಟಾನ್ಸ್ ಪರ ಶತಕ ಬಾರಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಶುಭ್ಮನ್ ಗಿಲ್ ಪಾತ್ರರಾದರು.

ಹಿಂದಿನ ಲೇಖನಮೇ ಕೊನೆಯ ವಾರ ನೂತನ ಸಂಸತ್ ಭವನ ಉದ್ಘಾಟನೆ ಸಾಧ್ಯತೆ
ಮುಂದಿನ ಲೇಖನರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ