ಮನೆ ಕ್ರೀಡೆ IPL 2024: ನೇರವಾಗಿ ಪ್ಲೇಆಫ್​ ಪ್ರವೇಶಿಸಿದ ರಾಜಸ್ಥಾನ್ ರಾಯಲ್ಸ್

IPL 2024: ನೇರವಾಗಿ ಪ್ಲೇಆಫ್​ ಪ್ರವೇಶಿಸಿದ ರಾಜಸ್ಥಾನ್ ರಾಯಲ್ಸ್

0

ಇಂಡಿಯನ್ ಪ್ರೀಮಿಯರ್ ಲೀಗ್ ​ನ   64ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಜಯ ಸಾಧಿಸಿದೆ. ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಈ ಗೆಲುವಿನೊಂದಿಗೆ ರಾಜಸ್ಥಾನ್ ರಾಯಲ್ಸ್  ತಂಡ ಪ್ಲೇಆಫ್ ಪ್ರವೇಶಿಸಿರುವುದು ವಿಶೇಷ.

Join Our Whatsapp Group

ಅಂದರೆ ಅಂಕ ಪಟ್ಟಿಯಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡವು ಮುಂದಿನ 2 ಪಂದ್ಯಗಳಲ್ಲಿ ಸೋತರೂ ಟಾಪ್-4 ನಲ್ಲಿ ಕಾಣಿಸಿಕೊಳ್ಳುವುದು ಖಚಿತ. ಏಕೆಂದರೆ ಆರ್​ಆರ್​ ತಂಡವು ಈಗಾಗಲೇ 16 ಅಂಕಗಳನ್ನು ಕಲೆಹಾಕಿದೆ. ಇನ್ನು ಸಿಎಸ್​ಕೆ ಮತ್ತು ಎಸ್​ಆರ್​ಹೆಚ್​ ತಂಡಗಳಿಗೆ ಮಾತ್ರ 16 ಅಂಕಗಳನ್ನು ಸಂಪಾದಿಸಲು ಅವಕಾಶವಿದೆ.

ಸನ್​ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು 16 ಅಂಕಗಳನ್ನು ಕಲೆಹಾಕಿದರೂ ರಾಜಸ್ಥಾನ್ ರಾಯಲ್ಸ್ ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದೆ. ಹೀಗಾಗಿಯೇ 2 ಪಂದ್ಯಗಳಿದ್ದರೂ ಅಂಕ ಪಟ್ಟಿಯಲ್ಲಿರುವ ದ್ವಿತೀಯ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡವು ನೇರವಾಗಿ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ.

ಸದ್ಯ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಪ್ಲೇಆಫ್​ಗೆ ಅರ್ಹತೆಗಿಟ್ಟಿಸಿಕೊಂಡಿದ್ದು, ಉಳಿದೆರಡು ಸ್ಥಾನಗಳಿಗಾಗಿ ಚೆನ್ನೈ ಸೂಪರ್ ಕಿಂಗ್ಸ್, ಸನ್​ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ನೇರ ಪೈಪೋಟಿ ಇದೆ.

ಒಂದು ವೇಳೆ ಆರ್ ​ಸಿಬಿ ತಂಡವು ಸಿಎಸ್​ಕೆ ವಿರುದ್ಧ ಕೊನೆಯ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದರೆ, ಅಂಕ ಪಟ್ಟಿಯಲ್ಲಿ 3ನೇ ಅಥವಾ 4ನೇ ಸ್ಥಾನ ಅಲಂಕರಿಸುವ ಮೂಲಕ ಪ್ಲೇಆಫ್​ಗೆ ಪ್ರವೇಶಿಸಬಹುದು. ಹೀಗಾಗಿ ಸಿಎಸ್​ ಕೆ-ಆರ್ ​ಸಿಬಿ ನಡುವಣ ಪಂದ್ಯದಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.