ಬೆಂಗಳೂರು : ಐಪಿಎಲ್ ಕ್ರಿಕೆಟ್ ಪಂದ್ಯಗಳು ಏ.15, ಏ.18 ಹಾಗೂ ಏ.24 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಹಿನ್ನಲೆ ಏ.15, 24ರಂದು ರಾತ್ರಿ 2 ಗಂಟೆವರೆಗೆ ನಮ್ಮ ಮೆಟ್ರೋ ಕಾರ್ಯನಿರ್ವಹಿಸಲಿದೆ.
ಪ್ರಯಾಣಿಕರಿಗೆ ಸುರಕ್ಷಿತೆ ಹಾಗೂ ಅನುಕೂಲಕರ ಸಂಚಾರವನ್ನು ಕಲ್ಪಿಸುವ ಉದ್ದೇಶದಿಂದ ಬಿಎಂಆರ್‌ಸಿಎಲ್ ಏ.15 ಮತ್ತು 24ರ ರಾತ್ರಿ ಮೆಟ್ರೋ ರೈಲಿನ ಸೇವಾ ಅವಧಿಯನ್ನು ವಿಸ್ತರಿಸಲಾಗುತ್ತಿದೆ. ಈ ದಿನಗಳಲ್ಲಿ, ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲು ಸೇವೆಗಳು ರಾತ್ರಿ 11:00 ಗಂಟೆಯಿಂದ ಮುಂದಿನ ದಿನದ ಮುಂಜಾನೆ 2:00 ಗಂಟೆಯವರೆಗೆ ವಿಸ್ತರಿಸಲಾಗಿದೆ.
ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ರೈಲುಗಳು ಕೆಳಗಿನ ವೇಳಾಪಟ್ಟಿಯಂತೆ ಹೊರಡಲಿವೆ – ವೈಟ್‌ಫೀಲ್ಡ್ಯಿಂದ (ಕಾಡುಗೋಡಿ) ರಾತ್ರಿ 12:30ಕ್ಕೆ ಹಾಗೂ ಚಲ್ಲಘಟ್ಟದಿಂದ ರಾತ್ರಿ 12:45ಕ್ಕೆ, ರೇಷ್ಮೆ ಸಂಸ್ಥೆ ಹಾಗೂ ಮಾದಾವರದಿಂದ ರಾತ್ರಿ 12:45ಕ್ಕೆ, ಬೊಮ್ಮಸಂದ್ರದಿಂದ ರಾತ್ರಿ 12:30ಕ್ಕೆ ಹಾಗೂ ಆರ್.ವಿ ರಸ್ತೆಯಿಂದ ರಾತ್ರಿ 02:00ಕ್ಕೆ, ನಾಡಪ್ರಭು ಕೆಂಪೇಗೌಡ ನಿಲ್ದಾಣ ಮಜೆಸ್ಟಿಕ್‌ನಿಂದ ನಾಲ್ಕು ದಿಕ್ಕುಗಳಿಗೆ ಮಧ್ಯರಾತ್ರಿ 01:30ಕ್ಕೆ ಕೊನೆಯ ರೈಲು ಹೊರಡಲಿದೆ.
ಇನ್ನೂ ಏ.18ರಂದು ನಡೆಯಲಿರುವ ಪಂದ್ಯದ ದಿನದಂದು ಮೆಟ್ರೋ ರೈಲು ಸೇವೆಗಳ ಅವಧಿಯಲ್ಲಿ ಯಾವುದೇ ವಿಸ್ತರಣೆ ಇರುವುದಿಲ್ಲ. ರೈಲುಗಳು ನಿಗದಿತ ವೇಳಾಪಟ್ಟಿಯಂತೆ ಸಂಚರಿಸಲಿವೆ.















