IPL 2026 ವೈಭವ್ ಸೂರ್ಯವಂಶಿಯು ಸಿಕ್ಸ್-ಫೋರ್ಗಳ ಸುರಿಮಳೆಗೈಯುತ್ತಿರುವ 15 ವರ್ಷದ ಅದ್ಭುತ ಕ್ರಿಕೆಟ್ ಆಟಗಾರ ಆಗಿದ್ದಾರೆ, ಈಗ ಕೇವಲ ಕ್ರಿಕೆಟ್ ಮೈದಾನದಲ್ಲಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣದಲ್ಲೂ ಹೆಚ್ಚು ಸಂಚಲನ ಮೂಡಿಸಿದ್ದಾರೆ ಎನ್ನಬಹುದು. ಅವರ ಸ್ಫೋಟಕ ಬ್ಯಾಟಿಂಗ್ ನೋಡಿ ಅರಗಿಸಿಕೊಳ್ಳಲಾಗದ ಪಾಕಿಸ್ತಾನದ ವಿಶ್ಲೇಷಕರೊಬ್ಬರು “ವೈಭವ್ ಬ್ಯಾಟ್ನಲ್ಲಿ AI ಚಿಪ್ ಇದೆ” ಎಂಬ ಗಂಭೀರ ಆರೋಪ ಮಾಡಿದ್ದಾರೆ ಎನ್ನಲಾಗಿದೆ. ಈ ಹಾಸ್ಯಾಸ್ಪದ ಆರೋಪಕ್ಕೆ ವೈಭವ್ ಸೂರ್ಯವಂಶಿ ಅವರು ನೀಡಿರುವ ‘ಕ್ಲಾಸ್’ ಪ್ರತಿಕ್ರಿಯೆ ಈಗ ಎಲ್ಲೆಡೆ ವೈರಲ್ ಆಗುತ್ತಿದೆ ಎನ್ನಬಹುದು.
ಪಾಕಿಸ್ತಾನದ ಖ್ಯಾತ ಕ್ರೀಡಾ ವಿಶ್ಲೇಷಕ ಡಾ. ನೌಮಾನ್ ನಿಯಾಝ್ ಅವರು, ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ, “ಈ 15 ವರ್ಷದ ಹುಡುಗ ಹೊಡೆಯುವ ಹೊಡೆತಗಳು ಮನುಷ್ಯನಿಂದ ಸಾಧ್ಯವಿಲ್ಲದಂತಿದೆ. ವೈಭವ್ ಅವರ ಬ್ಯಾಟ್ ಅನ್ನು ವಾಡಾ ಪರೀಕ್ಷೆಗೆ ಕಳುಹಿಸಿ ಲ್ಯಾಬ್ನಲ್ಲಿ ಪರೀಕ್ಷಿಸಬೇಕು. ಅವರ ಬ್ಯಾಟ್ನಲ್ಲಿ ಯಾವುದೋ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಚಿಪ್ ಇದೆ ಅಂತ ಅನಿಸುತ್ತಿದೆ” ಎಂಬ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಬ್ಯಾಟ್ನಲ್ಲಿ ಎಐ ಚಿಪ್ ಇರುವ ಕಾರಣ ವೈಭವ್ ಆ ರೀತಿಯಾಗಿ ಬ್ಯಾಟ್ ಮಾಡುತ್ತಿದ್ದಾನೆ. ಇಲ್ಲದಿದ್ದರೆ ಈ ಚಿಕ್ಕ ವಯಸ್ಸಿಗೆ ಅಂತಹ ಆಟ ಆಡಲು ಸಾಧ್ಯವಿಲ್ಲ ಎಂದಿದ್ದಾರೆ .
ಅದಕ್ಕೆ ವೈಭವ್ ಅವರು ಕೊಟ್ಟ ಸ್ಮಾರ್ಟ್ ಉತ್ತರ!
ವೈಭವ್ ಅವರು ರಾಜಸ್ಥಾನ್ ರಾಯಲ್ಸ್ ಹಂಚಿಕೊಂಡಿರುವ ವಿಡಿಯೋದಲ್ಲಿ ಈ ಬಗ್ಗೆ ಅತ್ಯಂತ ವಿನಯವಾಗಿ ಮತ್ತು ತಮಾಷೆಯಾಗಿ ಉತ್ತರಿಸಿದ್ದಾರೆ.
“ನನ್ನ ಬ್ಯಾಟ್ನಲ್ಲಿ ಚಿಪ್ ಏನಾದರೂ ಇದ್ದರೆ ಅದನ್ನು ದೇವರೆ ಹಾಕಿ ಕಳುಹಿಸಿದ್ದಾರೆ. ದೇವರು ಮೇಲಿಂದಲೇ ಹೇಳಿದ್ದ, ನಿನ್ನ ಬ್ಯಾಟ್ನಲ್ಲಿ ಒಂದು ವಿಶೇಷ ಶಕ್ತಿ ಕೊಡುತ್ತಿದ್ದೇನೆ ಎಂದು. ಹಾಗಾಗಿ ನಾನು ಕೇವಲ ಅದನ್ನು ಬಳಸುತ್ತಿದ್ದೇನೆ ಅಷ್ಟೇ,” ಎಂದು ವೈಭವ್ ತಮಾಷೇಯಾಗಿ ನಗುತ್ತಾ ಹೇಳಿದ್ದಾರೆ ಎನ್ನಲಾಗಿದೆ ..
ಖ್ಯಾತ ಕ್ರೀಡಾ ವಿಶ್ಲೇಷಕ ಡಾ. ನೌಮಾನ್ ನಿಯಾಝ್, ವೈಭವ್ ಬ್ಯಾಟ್ ಮೇಲೆ ಸಂದೇಹ ವ್ಯಕ್ತಪಡಿಸಲು ಮುಖ್ಯ ಕಾರಣ. ಅಂದರೆ ಪ್ರಸ್ತುತ ಐಪಿಎಲ್ನಲ್ಲಿ ವೈಭವ್ ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ ಎಂದು ಹೇಳಲಾಗಿದೆ. ಆರೆಂಜ್ ಕ್ಯಾಪ್ ರೇಸ್ನಲ್ಲಿ ದ್ವಿತೀಯ ಸ್ಥಾನದಲ್ಲಿರುವ ವೈಭವ್ ಸೂರ್ಯವಂಶಿ ತಮ್ಮ ಮೇಲೆ ಕೇಳಿ ಬರುತ್ತಿರುವ ಟೀಕೆ ಮತ್ತು ವಿಲಕ್ಷಣ ವಾದಗಳಿಗೆ ತನ್ನ ಬ್ಯಾಟ್ ಮೂಲಕವೇ ಉತ್ತರಿಸುತ್ತಿದ್ದಾರೆ. ಈ ಉತ್ತರದಿಂದಾಗಿ ಬೌಲರ್ಗಳು ಕಂಗೆಟ್ಟಿರುವುದಂತು ಸುಳ್ಳಲ್ಲ ಎಂದು ಹೇಳಬಹುದು














