ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಒಂದು ಕಾಲದ ಭೀಕರ ಹಾಗೂ ಭದ್ರ ಜೈಲಾಗಿದ್ದ ಅಲ್ಕಾಟ್ರಾಜ್ ಜೈಲನ್ನು ಮತ್ತೆ ತೆರೆಯಲು ಮುಂದಾಗಿರುವುದಾಗಿ ಕೆಲ ವರದಿಗಳು ಹೇಳುತ್ತಿವೆ. ಸ್ಯಾನ್ ಫ್ರಾನ್ಸಿಸ್ಕೋ ನಗರದ ಕರಾವಳಿಯಿಂದ ಸುಮಾರು 2 ಕಿಮೀ ದೂರದಲ್ಲಿರುವ ಈ ಜೈಲು, ಈಗ ಪ್ರವಾಸಿ ತಾಣವಾಗಿ ಪರಿಣಮಿಸಿಕೊಂಡಿದ್ದರೂ, ಟ್ರಂಪ್ ಅದನ್ನು ಮತ್ತೆ ಕಾರ್ಯರೂಪಕ್ಕೆ ತರಲು ಯತ್ನಿಸುತ್ತಿದ್ದಾರೆ ಎಂಬ ಸುದ್ದಿಗೆ ಹೊಸ ಚರ್ಚೆಗಳಿಗೆ ವೇದಿಕೆ ಒದಗಿಸಿದೆ.
ಅಲ್ಕಾಟ್ರಾಜ್ ದ್ವೀಪದಲ್ಲಿ ಸ್ಥಿತಿಯಲ್ಲಿರುವ ಈ ಜೈಲು ಮೂಲತಃ ಯುಎಸ್ ಸೇನೆಯ ರಕ್ಷಣಾ ಕೋಟೆಯಾಗಿತ್ತು. 1912ರಲ್ಲಿ ಮಿಲಿಟರಿ ಜೈಲಾಗಿ ಪರಿವರ್ತನೆಯಾಗಿದ್ದು, ನಂತರ 1934ರಲ್ಲಿ ಫೆಡರಲ್ ಪ್ರಿಸನ್ ಆಗಿ ಬಳಸಲ್ಪಟ್ಟಿತು. ಇದು ಸುಮಾರು 22 ಎಕರೆ ಪ್ರದೇಶದಲ್ಲಿ ವಿಸ್ತಾರಗೊಂಡಿದ್ದು, ಅತ್ಯಂತ ಅಪಾಯಕಾರಿ ಅಪರಾಧಿಗಳನ್ನು ಇಲ್ಲಿ ಇರಿಸಲಾಗುತ್ತಿತ್ತು. ಇವರಲ್ಲಿ ಖ್ಯಾತ ದರೋಡೆಕೋರ ಅಲ್ ಕಪೋನ್ ಸೇರಿದಂತೆ ಹಲವರು ಸೇರಿದ್ದರು.
ಈ ಜೈಲು ಅದೆಷ್ಟು ಭದ್ರವಾಗಿತ್ತು ಎಂದರೆ, ವಿಶ್ವದ ಅಪಾಯಕಾರಿ ಕೈದಿಗಳು ಸಹ ಇಲ್ಲಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇರಲಿಲ್ಲ. ಯಾಕಂದ್ರೆ ಈ ಜೈಲಿನಲ್ಲಿದ್ದ ಕೈದಿಗಳಿಗೆ ಕೋಲು ಹಿಡಿದು ಕಾಯುವ ಪೊಲೀಸರು ಇರಲಿಲ್ಲ, ಬದಲಿಗೆ ಶಾರ್ಕ್ ಮೀನುಗಳೇ ಈ ಜೈಲಿನ ಕಾವಲು ಕಾಯುತ್ತಿದ್ದವು. ಇಂತಹ ಜೈಲು 3 ಬಾರಿ ಪ್ರವಾಹಕ್ಕೆ ತುತ್ತಾಗಿದ್ದರಿಂದ ಗೋಡೆಗಳೆಲ್ಲ ಹಾನಿಗೊಳಗಾಗಿತ್ತು. ಅಲ್ಲದೇ ನಿರ್ವಹಣಾ ವೆಚ್ಚ ಹೆಚ್ಚಾದ ಕಾರಣದಿಂದ 1963ರಲ್ಲಿ ಈ ಜೈಲನ್ನು ಬಂದ್ ಮಾಡಲಾಗಿತ್ತು.
ಅಲ್ಪಸ್ವಲ್ಪ ಕಾಲದ ಹಿಂದೆ ಟ್ರಂಪ್ ಜೈಲು ಪುನರ್‌ಆರಂಭದ ಕುರಿತು ಮಾತನಾಡಿದ್ದು, “ಅಮೆರಿಕ ಕ್ರೂರ, ಪುನರಾವರ್ತಿತ ಅಪರಾಧಿಗಳಿಂದ ಬಳಲುತ್ತಿದೆ. ಇಂತಹ ಅಪರಾಧಿಗಳನ್ನು ನಿಯಂತ್ರಿಸಲು ಅಲ್ಕಾಟ್ರಾಜ್ ಪಠ್ಯವಾಗಬಹುದು” ಎಂದು ಅವರು ಹೇಳಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಟ್ರಂಪ್ ಈ ಜೈಲನ್ನು “ಕಾನೂನು, ಸುವ್ಯವಸ್ಥೆ ಮತ್ತು ನ್ಯಾಯದ ಸಂಕೇತ” ಎಂದು ಹೇಳಿಕೊಂಡಿದ್ದಾರೆ.
ಅಲ್ಕಾಟ್ರಾಜ್ ಜೈಲಿನಲ್ಲಿ ಅತ್ಯಂತ ಕ್ರೂರಿಗಳನ್ನು ಇರಿಸಲಾಗುತ್ತದೆ. ಕೆಲಸಕ್ಕಾಗಿ ಹಾಗೂ ನಮ್ಮ ದೇಶಕ್ಕೆ ಅಕ್ರಮವಾಗಿ ಬಂದ ಅಪರಾಧಿಗಳ ವಿರುದ್ಧ ಕ್ರಮಕೈಗೊಳ್ಳಲು ನಮಗೆ ಅವಕಾಶವಿದೆ. ಗೂಂಡಾಗಳಿಗೆ ನಾವಿನ್ನು ಮುಂದೆ ಹೆದರುವುದಿಲ್ಲ. ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳುತ್ತೇವೆ ಎಂದು ಟ್ರಂಪ್ ಹೇಳಿಕೊಂಡಿದ್ದಾರೆ. ಬಹಳ ಸಮಯದಿಂದ, ಅಮೆರಿಕವು ಕ್ರೂರ, ಹಿಂಸಾತ್ಮಕ ಮತ್ತು ಪುನರಾವರ್ತಿತ ಅಪರಾಧಿಗಳಿಂದ ಬಳಲುತ್ತಿದೆ. ಅಂತಹ ಕ್ರಿಮಿನಲ್‌ಗಳು ಸಮಾಜದ ಕಸ, ಅವರು ಸಮಾಜಕ್ಕೆ ದುಃಖವನ್ನು ಹೊರತುಪಡಿಸಿ ಬೇರೆ ಏನನ್ನೂ ನೀಡುವುದಿಲ್ಲ. ಅದಕ್ಕಾಗಿ ಈ ಜೈಲು ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.














