ಅಹ್ಮದಾಬಾದ್: ವೆಸ್ಟ್ ಇಂಡೀಸ್ ವಿರುದ್ಧ ಭಾನುವಾರ ನಡೆಯಲಿರುವ ಮೊದಲ ಏಕದಿನ ಪಂದ್ಯಕ್ಕೆ ಕೆಎಲ್ ರಾಹುಲ್ ಲಭ್ಯರಿಲ್ಲ ಅಲ್ಲದೇ ಶಿಖರ್ ಧವನ್ಗೆ ಕೊರೊನಾ ಬಂದಿರುವುದರಿಂದ ಇಶಾನ್ ಕಿಶನ್ ತಮ್ಮ ಜೊತೆ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ ಎಂದು ನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ.
ಫೆಬ್ರವರಿ 6 ರಿಂದ ವಿಂಡೀಸ್ ವಿರುದ್ಧ ನಡೆಯಲಿರುವ ಏಕದಿನ ಸರಣಿಗಾಗಿ ಭಾರತ ತಂಡದ ಅಹ್ಮದಾಬಾದ್ಗೆ ಆಗಮಿಸಿದ ನಂತರ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿ 4 ಆಟಗಾರರು ಸೇರಿದಂತೆ ಒಟ್ಟು 7 ಮಂದಿಗೆ ಕೋವಿಡ್ 19 ಪಾಸಿಟಿವ್ ದೃಢಪಟ್ಟಿತ್ತು.
ಶಿಖರ್ ಧವನ್, ಶ್ರೇಯಸ್ ಅಯ್ಯರ್, ನದದೀಪ್ ಸೈನಿ ಮತ್ತು ರುತುರಾಜ್ ಗಾಯಕ್ವಾಡ್ ಹಾಗೂ 3 ಮಂದಿ ಬೆಂಬಲ ಸಿಬ್ಬಂದಿಗೆ ಕೊರೊನಾ ದೃಢಪಟ್ಟಿತ್ತು. ಆರಂಭಿಕ ಧವನ್ ಕ್ವಾರಂಟೈನ್ನಲ್ಲಿದ್ದರೆ, ಉಪನಾಯಕ ರಾಹುಲ್ ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ. ಹಾಗಾಗಿ ಇಶಾನ್ ಕಿಶನ್ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ ಎಂದು ರೋಹಿತ್ ಮಾಹಿತಿ ನೀಡಿದ್ದಾರೆ. ತಂಡದಲ್ಲಿರುವ ಆಟಗಾರರಲ್ಲಿ ಆರಂಭಿಕ ಸ್ಥಾನಕ್ಕೆ ಇಶಾನ್ ಕಿಶನ್ ನಮ್ಮ ಮುಂದಿರುವ ಏಕೈಕ ಆಯ್ಕೆಯಾಗಿದೆ. ಅವರು ನನ್ನ ಜೊತೆ ಮೊದಲ ಪಂದ್ಯದಲ್ಲಿ ಇನ್ನಿಂಗ್ಸ್ ಆರಂಭಿಸುತ್ತಾರೆ ಎಂದು ತಿಳಿಸಿದ್ದಾರೆ.
ಫೆಬ್ರವರಿ 6, 9 ಮತ್ತು 11ರಂದು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ 3 ಏಕದಿನ ಪಂದ್ಯಗಳು ನಡೆಯಲಿವೆ, ಕೋವಿಡ್ ಕಾರಣ ಈ ಪಂದ್ಯಗಳಿಗೆ ಪ್ರೇಕ್ಷಕರಿಗೆ ಅವಕಾಶ ಇರುವುದಿಲ್ಲ , ಆದರೆ ಟಿ20 ಸರಣಿ ಕೋಲ್ಕತ್ತಾದ ಈಡನ್ ಗಾರ್ಡನ್ನಲ್ಲಿ ಶೇ.75 ರಷ್ಟು ಪ್ರೇಕ್ಷಕರ ಸಮ್ಮುಖದಲ್ಲಿ ನಡೆಯಲಿದೆ.