ಬೀದರ್ : ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಡಿ ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮಾಜಿ ಕೇಂದ್ರ ಸಚಿವ ಭಗವಂತ್ ಖೂಬಾ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತ ಸುರೇಶ್ ಬಿರಾದಾರ ಎಂಬುವವರು ಭಾಲ್ಕಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಖೂಬಾ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಭಾಲ್ಕಿಯ ಸಿವಿಲ್ & ಜೆಎಂಎಫ್‌ಸಿ ನ್ಯಾಯಾಲಯ ಅನುಮತಿ ಹಿನ್ನೆಲೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಈಶ್ವರ್ ಖಂಡ್ರೆ ಅವನತಿ ಶುರುವಾಗಿದೆ, ನೀನು ಸತ್ತರೆ ನಿನಗೆ ಮೋಕ್ಷ ಸಿಗುವುದಿಲ್ಲ. ಪೊಲೀಸ್ ಇಲಾಖೆ, ಜಿಲ್ಲಾಡಳಿತ ಮುಂದಿಟ್ಟುಕೊಂಡು ಕಾಂಗ್ರೆಸ್ ಕಾರ್ಯಕ್ರಮ ಮಾಡಿಕೊಳ್ಳುತ್ತಿದ್ದಿ. ನೀನು ಹಿಜಡಾ ಇದ್ದೀಯಾ ಎಂದೆಲ್ಲಾ ಏಕವಚನದಲ್ಲೇ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಫೆ.7ರಂದು ನಡೆದ ಪಾಪನಾಶ ದೇವಸ್ಥಾನ ಅಭಿವೃದ್ಧಿ ಕಾಮಗಾರಿಗೆ ಚಾಲನೆ ವೇಳೆ ಪ್ರತಿಭಟಸಿದ್ದ ಭಗವಂತ್ ಖೂಬಾ ಸೇರಿದಂತೆ ಬಿಜೆಪಿ ನಾಯಕರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ವಶಕ್ಕೆ ಪಡೆದ ಬಳಿಕ ಫೆಸ್‌ಬುಕ್ ಲೈವ್‌ನಲ್ಲಿ ಈಶ್ವರ್ ಖಂಡ್ರೆ ವಿರುದ್ಧ ಖೂಬಾ ಮನಸ್ಸೋ ಇಚ್ಛೆ ನಿಂದಿಸಿದ್ದು, ಘಟನೆ ನಡೆದ 9 ದಿನಗಳ ಬಳಿಕ ಖೂಬಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ.















